ಪಡುಬಿದ್ರಿ: ಕಾಪು ಪಟ್ಟಣದಲ್ಲಿ ಕೊಳಚೆ ನೀರು ನಿರ್ವಹಣೆ ಪುರಸಭೆಗೆ ಸವಾಲಾಗಿ ಪರಿಣಮಿಸಿದೆ.

ಪೇಟೆ ಭಾಗದಿಂದ ಹರಿದುಬರುವ ಕೊಳಚೆ ನೀರನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಶುದ್ಧೀಕರಿಸಲು ಶಾಶ್ವತ ಕೊಳಚೆ ನೀರು ಸಂಗ್ರಹಣಾ ಹಾಗೂ ಸಂಸ್ಕರಣಾ ಘಟಕ (ಎಸ್ಟಿಪಿ) ಸ್ಥಾಪನೆ ಅಗತ್ಯವಾಗಿದ್ದು, ಇದಕ್ಕಾಗಿ ಜಾಗ ಗುರುತಿಸುವ ಕಾರ್ಯವೇ ಸವಾಲಾಗಿದೆ.

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಕಾಪು, ಪಡು, ಉಳಿಯರಗೋಳಿ ಹಾಗೂ ಮಲ್ಲಾರು ಕಂದಾಯ ಗ್ರಾಮ ಗಳು ಸೇರಿದ್ದು, 23 ವಾರ್ಡ್ಗಳು ಇವೆ. ಮನೆ, ವಾಣಿಜ್ಯ ಕಟ್ಟಡಗಳು ಹಾಗೂ ವಸತಿ ಸಮುಚ್ಚಯಗಳ ಸಂಖ್ಯೆ ಹೆಚ್ಚುತ್ತಿದೆ. ಅಲ್ಲದೆ ಬಹುತೇಕ ವಾಣಿಜ್ಯ ಸಂಕೀರ್ಣ, ವಸತಿ ಸಮುಚ್ಚಯ ಹಾಗೂ ಹೋಟೆಲ್ಗಳಿಂದ ನಿರಂತರವಾಗಿ ಹರಿದು ಬರುವ ತ್ಯಾಜ್ಯ ಮತ್ತು ಕೊಳಚೆ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ.

ಕೆಲವು ಪ್ರದೇಶಗಳಲ್ಲಿ ಚರಂಡಿಗಳ ಮೂಲಕ ಹರಿಯುವ ಕೊಳಚೆ ನೀರು ಮಳೆಗಾಲದಲ್ಲಿ ರಸ್ತೆಗಳಿಗೂ ಹರಿದು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದೆ. ಪರಿಸರ ಮಾಲಿನ್ಯ ತಡೆಯಲು ಹಾಗೂ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟು ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಿಸುವುದು ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಆದರೆ, ಘಟಕ ಸ್ಥಾಪನೆಗೆ ಅಗತ್ಯವಿರುವ ಜಾಗ ಲಭ್ಯವಾಗದಿರುವುದು ಯೋಜನೆ ಜಾರಿಗೆ ಅಡ್ಡಿಯಾಗಿದೆ. ಈಗಾಗಲೇ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಹಲವು ಜಾಗಗಳನ್ನು ಗುರುತಿಸಲಾಗಿದ್ದರೂ ಸ್ಥಳೀಯ ನಿವಾಸಿಗಳ ವಿರೋಧ ಹಾಗೂ ಜಾಗ ಅಷ್ಟು ಸೂಕ್ತವಲ್ಲ ಎಂಬ ಅಭಿಪ್ರಾಯ ತಜ್ಞರಿಂದ ವ್ಯಕ್ತವಾಗಿತ್ತು. ಈ ಕಾರಣಕ್ಕೆ ಎಸ್ಟಿಪಿ ನಿರ್ಮಾಣಕ್ಕೆ ಜಾಗ ಮಂಜೂರು ಪ್ರಕ್ರಿಯೆ ಇನ್ನೂ ಬಾಕಿಯಾಗಿದೆ.

ಜನವಸತಿ ಪ್ರದೇಶಗಳಿಂದ ದೂರ ವಿರುವ, ಪರಿಸರದ ದೃಷ್ಟಿಯಿಂದ ಸುರಕ್ಷಿತ ಹಾಗೂ ತಾಂತ್ರಿಕ ಮಾನದಂಡಗಳಿಗೆ ಹೊಂದುವ ಸ್ಥಳವನ್ನು ಆಯ್ಕೆ ಮಾಡಬೇಕಿರುವುದರಿಂದ ಪುರಸಭೆ ಆಡಳಿತ ಹಲವು ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ಈ ಕುರಿತು ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದ್ದು, ಪರಿಸರ ಸಂರಕ್ಷಣೆ ಹಾಗೂ ಆರೋಗ್ಯದ ದೃಷ್ಟಿಯಿಂದ ದೀರ್ಘಕಾಲಿಕ ಪರಿಹಾರಕ್ಕೆ ಎಲ್ಲರೂ ಕೈಜೋಡಿಸಬೇಕು ಎನ್ನುತ್ತಾರೆ ಅಧಿಕಾ ರಿಗಳು.

ಮೂಳೂರಿನಲ್ಲಿ ವಿರೋಧ: ಮೂಳೂ ರಿನಲ್ಲಿ ಎಸ್ಟಿಪಿ ನಿರ್ಮಾಣಕ್ಕಾಗಿ ಜಾಗ ಗುರುತಿಸಲಾಗಿದೆ. ಆದರೆ ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಕಾಪು ಪಟ್ಟಣದಲ್ಲಿ ಎಸ್ಟಿಪಿ ನಿರ್ಮಾಣಕ್ಕೆ ₹5 ಕೋಟಿ ಮೀಸಲಿಡಲಾಗಿದೆ. ಘಟಕ ನಿರ್ಮಾಣ ವಿಳಂಬವಾಗುತ್ತಿರುವ ಹಿನ್ನೆಲೆ ರಾಷ್ಟ್ರೀಯ ಹಸಿರು ಪೀಠ (ಎನ್ಜಿಟಿ) ವತಿಯಿಂದಲೂ ನೋಟಿಸ್ ಜಾರಿ ಯಾಗಿದೆ. ಈಗಾಗಲೇ ಪುರಸಭೆ ವ್ಯಾಪ್ತಿಯ ಹಲವು ಜಾಗಗಳನ್ನು ಪರಿಶೀಲಿಸಲಾಗಿದ್ದು, ಪ್ರಸ್ತುತ ಗುರುತಿಸಿರುವ ಮೂಳೂರು ಪ್ರದೇಶದ ಜಾಗ ತಜ್ಞರು ಸೂಕ್ತವೆಂದು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯೂ ಜಾಗಕ್ಕೆ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಪುರಸಭೆ ಮುಖ್ಯಾಧಿಕಾರಿ ನೀಲಕಂಠನ್ ಮೇಸ್ತ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-28-675480566

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.