ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಲೋಕಕ್ಕೆ ಮಾದರಿಯಾಗಿ ಪಡುಬಿದ್ರಿ ದೇವಳ ಜೀರ್ಣೋದ್ಧಾರ

Published 9 ಜುಲೈ 2024, 5:55 IST
Last Updated 9 ಜುಲೈ 2024, 5:55 IST
ಅಕ್ಷರ ಗಾತ್ರ

ಪಡುಬಿದ್ರಿ: ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವನ್ನು ಭಕ್ತರ ಸಹಕಾರದೊಂದಿಗೆ ವಿನೂತನ ಶೈಲಿಯಲ್ಲಿ ಲೋಕಕ್ಕೆ ಮಾದರಿಯಾಗಿ ನಿರ್ವಹಿಸಲಾಗುತ್ತದೆ ಎಂದು ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ, ಬೆಂಗಳೂರಿನ ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ, ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಡೆದ ಗೌರವ ಡಾಕ್ಟರೇಟ್‌ಗಾಗಿ ದೇವಳದ ಜೀರ್ಣೋದ್ಧಾರ ಸಮಿತಿ ಸದಸ್ಯರು, ಸಾರ್ವಜನಿಕರಿಂದ ದೇವಸ್ಥಾನದಲ್ಲಿ ಆಯೋಜಿಸಲಾದ ‘ಪ್ರಕಾಶಾಭಿನಂದನೆ’ ಸ್ವೀಕರಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಂಕಲ್ಪ ಶುದ್ಧಿಯಿಂದ ಸಂಕಲ್ಪ ಸಿದ್ಧಿಯಾಗುವುದು ಎನ್ನುವ ನುಡಿಯಂತೆ ಪ್ರಕಾಶ ಶೆಟ್ಟಿ ಅವರ ಮನದಾಳದ ಸಂಕಲ್ಪಗಳು ದೇವರ ಅನುಗ್ರಹದಿಂದ ತ್ವರಿತವಾಗಿ ಸಿದ್ಧಿಸಲಿ ಎಂದರು.

ಅರ್ಚಕ ಶ್ರೀಹರಿ ಭಟ್ ಅವರು ಪ್ರಕಾಶ ಶೆಟ್ಟಿ ಅವರ ಶುಭಾಶಂಸನೆಗೈದರು. ಡಾ.ರಾಘವೇಂದ್ರ ರಾವ್ ಅಭಿನಂದನಾ ಭಾಷಣ ಮಾಡಿದರು. ಆಶಾ ಪ್ರಕಾಶ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪಿ. ರಾಘವೇಂದ್ರ ನಾವಡ, ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ವೈ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಕಮಿಷನರ್ ಪ್ರಶಾಂತ್ ಕುಮಾರ್ ಶೆಟ್ಟಿ, ಅರ್ಚಕರಾದ ಗುರುರಾಜ ಭಟ್, ಹೆಜಮಾಡಿ ಪದ್ಮನಾಭ ಭಟ್, ಪದ್ಮನಾಭ ಕೊರ್ನಾಯ, ದೇವಳದ ಕಾರ್ಯ ನಿರ್ವಹಣಾಕಾರಿ ಅಶೋಕ್ ಕೋಟೆಕಾರ್, ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಮಾರಿಗುಡಿ ಸ್ವರ್ಣಗದ್ದುಗೆ ಸಮರ್ಪಣಾ ಸಮಿತಿ ಅಧ್ಯಕ್ಷ ರವಿ ಸುಂದರ ಶೆಟ್ಟಿ ಇದ್ದರು.

ಕೆ. ಪ್ರಕಾಶ್ ಶೆಟ್ಟಿ, ಆಶಾ ಪ್ರಕಾಶ್ ಶೆಟ್ಟಿ ದಂಪತಿಯನ್ನು ದೇವಸ್ಥಾನ ಜೀರ್ಣೋದ್ಧಾರ ಸಮಿತಿ, ವಿವಿಧ ಸಂಘ, ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು. ದೇವಸ್ಥಾನದ ಆನುವಂಶಿಕ ಮೊಕ್ತೇಸರ ಪೇಟೆಮನೆ ಭವಾನಿ ಶಂಕರ ಹೆಗ್ಡೆ ಸ್ವಾಗತಿಸಿದರು. ನವೀನ್‌ಚಂದ್ರ ಜೆ.ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಕಸ್ತೂರಿ ರಾಮಚಂದ್ರ ಅಭಿನಂದನಾ ಪತ್ರ ವಾಚಿಸಿದರು. ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ರವೀಂದ್ರನಾಥ ಜಿ.ಹೆಗ್ಡೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT