ಪಡುಬಿದ್ರಿ: ಸುಮಾರು ₹30 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಪುನರ್ ಪ್ರತಿಷ್ಠೆ ಹಾಗೂ ವೈಭವದ ಬ್ರಹ್ಮಕಲಶೋತ್ಸವವು ಎಪ್ರಿಲ್ 23ರಿಂದ ಮೇ 4ರವರೆಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.

ಪಡುಬಿದ್ರಿ ಶ್ರೀ ಲಕ್ಷ್ಮೀ ನಾರಾಯಣ ದೇವಳದ ಸಭಾಂಗಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬ್ರಹ್ಮಕಲಶೋತ್ಸವಕ್ಕಾಗಿ 20 ಸಮಿತಿಗಳನ್ನು ರಚಿಸಲಾಗಿದೆ ಎಂದರು.

ಕೆ.ಪ್ರಕಾಶ್ ಶೆಟ್ಟಿ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಜಂಟಿಯಾಗಿ ಅವರು ಶ್ರೀ ದೇವಳದ ಬ್ರಹ್ಮಕಲಶೋತ್ಸವದ ಲೋಗೋ ಬಿಡುಗಡೆಗೊಳಿಸಿದರು.

ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ದೇವಳದ ಸರ್ವ ಕಾರ್ಯಗಳಿಗೆ ಸಹಕಾರ ನೀಡಲು ಬದ್ಧನಿದ್ದೇನೆ ಎಂದರು.

ಹೊರೆಕಾಣಿಕೆ ಮೆರವಣಿಗೆ ಸಮಿತಿಯ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಎಪ್ರಿಲ್ 26ರಂದು ನಡೆಯಲಿರುವ ಹೊರೆ ಕಾಣಿಕೆ ಮೆರವಣಿಗೆಯ ಮಾಹಿತಿ ನೀಡಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುರಳೀನಾಥ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ನಟರಾಜ್ ಪಿ.ಎಸ್. ಮಾತನಾಡಿದರು.

ದೇವಳದ ಆನುವಂಶಿಕ ಮೊಕ್ತೇಸರರಾದ ರತ್ನಾಕರರಾಜ್ ಅರಸು ಕಿನ್ಯಕ್ಕ ಬಲ್ಲಾಳರು, ಪಡುಬಿದ್ರಿ ಪೇಟೆಮನೆ ಭವಾನಿಶಂಕರ್ ಹೆಗ್ಡೆ , ಜೀರ್ಣೊದ್ದಾರ ಸಮಿತಿಯ ಗೌರವಾಧ್ಯಕ್ಷ ಕೊರ್ನಾಯ ಪದ್ಮನಾಭ ರಾವ್, ಕಾರ್ಯನಿರ್ವಹಣಾಧಿಕಾರಿ ರಾಜಗೋಪಾಲ ಉಪಾಧ್ಯಾಯ, ಅರ್ಚಕ ಗುರುರಾಜ ಭಟ್ ಎರ್ಮಾಳು, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಪಿ.ರವೀಂದ್ರನಾಥ ಜಿ.ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಪಿ.ಆರ್.ನಾವಡ, ಕಾರ್ಯದರ್ಶಿಗಳಾದ ಶ್ರೀನಾಥ್ ಹೆಗ್ಡೆ , ವೈ.ಸುಕುಮಾರ್ ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ನವೀನ್ಚಂದ್ರ ಜೆ.ಶೆಟ್ಟಿ ಸ್ವಾಗತಿಸಿದರು. ಪಿ.ಶ್ರೀಧರ ಆಚಾರ್ ನಿರೂಪಿಸಿದರು. ವೈ.ಸುಕುಮಾರ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-28-2014971765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.