ಪಡುಬಿದ್ರಿ: ಪಡುಬಿದ್ರಿಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರು ಹಾಗೂ ಸಂಗೀತಾಸಕ್ತರನ್ನು ಸೆಳೆಯುತ್ತಿವೆ.

ಮಂಗಳವಾರ ಸಂಜೆ ನಡೆದ ಸಂಗೀತ ಸಂಜೆ ಕಾರ್ಯಕ್ರಮ ಪ್ರೇಕ್ಷಕರಿಗೆ ಮನರಂಜನೆಯ ಮೇಳವಾಯಿತು. ಗಾಯಕ ವಿಜಯ್ ಪ್ರಕಾಶ್ ಹಾಗೂ ಅವರ ಸಹಕಲಾವಿದರು ನೀಡಿದ ಸಂಗೀತ ಸಂಜೆಯು ಸುಮಾರು ಎರಡೂವರೆ ಗಂಟೆ ನಡೆಯಿತು. ಕಾರ್ಯಕ್ರಮದಲ್ಲಿ ಭಕ್ತಿ ಗೀತೆಗಳು ಮತ್ತು ಜನಪ್ರಿಯ ಚಲನಚಿತ್ರ ಹಾಡುಗಳ ಸಂಯೋಜನೆ ಪ್ರೇಕ್ಷಕರಿಗೆ ವಿಶಿಷ್ಟ ಅನುಭವ ನೀಡಿತು.

ವಿಜಯ್ ಪ್ರಕಾಶ್ ತಮ್ಮ ಮಧುರ ಕಂಠದಲ್ಲಿ ಹಾಡಿದ ಭಕ್ತಿ ಗೀತೆಗಳು ದೇವಾಲಯದ ಆವರಣದಲ್ಲಿ ಭಕ್ತಿಭಾವವನ್ನು ಮತ್ತಷ್ಟು ಹೆಚ್ಚಿಸಿದವು. ಜತೆಗೆ ಬೊಂಬೆ ಹೇಳುತೈತೆ..., ಸಿಂಗಾರ ಸಿರಿಯೇ, ಡೆನ್ನಾನಾ ಡೆನ್ನಾನ ಮೊದಲಾದ ಜನಪ್ರಿಯ ಚಿತ್ರಗೀತೆಗಳನ್ನು ಪ್ರಸ್ತುತಪಡಿಸಿ ಯುವಕರನ್ನು ಸೇರಿ ಎಲ್ಲ ವಯೋಮಾನದ ಪ್ರೇಕ್ಷಕರನ್ನು ಕುಣಿಯುವಂತೆ ಮಾಡಿದರು. ಪ್ರತಿಯೊಂದು ಹಾಡಿಗೂ ಭರ್ಜರಿ ಚಪ್ಪಾಳೆ ಹಾಗೂ ಹರ್ಷೋದ್ಗಾರ ವ್ಯಕ್ತವಾಯಿತು. ದೇವಸ್ಥಾನದ ಆವರಣದಲ್ಲಿ ಸಾವಿರಾರು ಭಕ್ತರು ಹಾಗೂ ಸಂಗೀತಾಸಕ್ತರು ಸೇರಿ ಕಾರ್ಯಕ್ರಮ ಆಸ್ವಾದಿಸಿದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-28-1261530902

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.