ಪಡುಬಿದ್ರಿ: ಮನುಷ್ಯನ ಜೀವನ ಸುಸೂತ್ರವಾಗಿ ಸಾಗಲು ಧರ್ಮ ಮತ್ತು ಸಂಸ್ಕೃತಿ ಅತ್ಯಂತ ಅವಶ್ಯಕ. ಇದು ಉಳಿಯಬೇಕಾದರೆ ನಮ್ಮೊಳಗೆ ಉತ್ತಮ ಸಂಸ್ಕಾರ ಬೆಳೆಸಬೇಕು ಎಂದು ಶ್ರೀಗುರು ದೇವದತ್ತ ಸಂಸ್ಥಾನದ ಒಡಿಯೂರು ಗುರುದೇವಾನಂದ ಸ್ವಾಮೀಜಿ ಹೇಳಿದರು.

ಗುರುವಾರ ಪಡುಬಿದ್ರಿಯ ಮಹಾ ಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಊರು ಜಾಗೃತಿಯಾದಾಗ ಮಾತ್ರ ಸತ್ಕರ್ಮ ಮತ್ತು ಧರ್ಮದ ಅನುಷ್ಠಾನ ಸಾಧ್ಯವಾಗುತ್ತದೆ. ಸಮಾಜದ ಪ್ರತಿಯೊಬ್ಬರೂ ಧರ್ಮ ಹಾಗೂ ಸಂಸ್ಕೃತಿಯ ಮಹತ್ವವನ್ನು ಅರಿತು ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಗುರಿಯನ್ನು ತಲುಪಬಹುದು ಎಂದರು.

ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉದಯ ಶೆಟ್ಟಿ ಎರ್ಮಾಳು, ಜ್ಞಾನ ಸುಧಾ ಕಾರ್ಕಳ ಶಿಕ್ಷಣ ಅಧ್ಯಕ್ಷ ಸುಧಾಕರ ಶೆಟ್ಟಿ ಕಾರ್ಕಳ, ವಿಶ್ವ ದೇವಾಡಿಗರ ಮಹಾಮಂಡಳದ ಅಧ್ಯಕ್ಷ ಧರ್ಮಪಾಲ್ ದೇವಾಡಿಗ, ಉದ್ಯಮಿ ಸೂರ್ಯಕಾಂತ್ ಜೆ.ಸುವರ್ಣ, ಜಿಲ್ಲಾ ಧಾರ್ಮಿಕ ಪರಿಷತ್ನ ಕೃಷ್ಣಮೂರ್ತಿ, ಯೋಗೀಶ್ ಶೆಟ್ಟಿ ಬಾಲಾಜಿ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸಂದೀಪ್ ಕುಮಾರ್ ಮಂಜ, ಮುಂಬೈ ಬಂಟರ ಸಂಘದ ಅಧ್ಯಕ್ಷ ಮಹೇಶ್ ಶೆಟ್ಟಿ, ಸಾಂತೂರು ಭಾಸ್ಕರ್ ಶೆಟ್ಟಿ, ಬೆಂಗಳೂರು ಜೀರ್ಣೊದ್ದಾರ ಸಮಿತಿಯ ಅಧ್ಯಕ್ಷ ಉಪೇಂದ್ರ ಶೆಟ್ಟಿ, ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಶ್ರೀಕಾಂತ ಉಪಾಧ್ಯಾಯ ಉಪಸ್ಥಿತರಿದ್ದರು.

ವೈ.ಸುಕುಮಾರ್ ಸನ್ಮಾನಿತರನ್ನು ಪರಿಚಯಿಸಿದರು.

ದಾಮೋದರ ಶರ್ಮ ಕಾರ್ಯಕ್ರಮ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-28-767240866

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.