ಪಡುಬಿದ್ರಿ: ತೆಂಕ ಗ್ರಾಮಪಂಚಾಯಿತಿ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ನಿರ್ಮಿಸಲಾಗುತ್ತಿರುವ ಕಾಲ್ನಡಿಗೆಯ ಮೇಲ್ಸೇತುವೆ (ಸ್ಕೈವಾಕ್) ನಿರ್ಮಾಣಕ್ಕೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಕುರಿತು ಸ್ಥಳೀಯ ನಿವಾಸಿ ರಾಮಕೃಷ್ಣ ರಾವ್ ಪತ್ರಿಕಾ ಪ್ರಕಟಣೆ ನೀಡಿದ್ದು, ಸರ್ಕಾರಿ ಮಾದರಿ ಶಾಲೆಯ ಆವರಣ ಗೋಡೆ ಬಳಿ ಅವೈಜ್ಞಾನಿಕವಾಗಿ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ತೆಂಕ ಗ್ರಾಮಪಂಚಾಯಿತಿ ಅಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು, ಶಾಸಕರು ಮತ್ತು ರಿಕ್ಷಾಚಾಲಕರ ಸಂಘಟನೆಗಳ ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

40 ಮೀಟರ್ ಅಗಲದ ಹೆದ್ದಾರಿ ದಾಟಲು ಪಾದಚಾರಿಗಳು ಸುಮಾರು 100 ಮೀಟರ್ ಏರಿ, ಬಳಿಕ 40 ಮೀಟರ್ ರಸ್ತೆ ದಾಟಿ ಮತ್ತೆ 100 ಮೀಟರ್ ಇಳಿಯಬೇಕಾಗುತ್ತದೆ. ಇದಲ್ಲದೆ, ಈ ಪ್ರದೇಶ ಜನನಿಬಿಡವಾಗಿಲ್ಲ. ಯಾವುದೇ ಪ್ರಮುಖ ಸ್ಥಳೀಯ ರಸ್ತೆ ಇಲ್ಲಿ ಸೇರುವುದಿಲ್ಲ. ವಾಣಿಜ್ಯ ಕೇಂದ್ರಗಳೂ ಇಲ್ಲ. ಸಮೀಪದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಕೂಡ 30ನ್ನು ಮೀರಿಲ್ಲ. ಪ್ರತಿದಿನ ರಸ್ತೆ ದಾಟುವವರ ಸಂಖ್ಯೆ ಕೂಡ ಹತ್ತರಿಂದ ಇಪ್ಪತ್ತರವರೆಗೆ ಮಾತ್ರ. ಇಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ಕೈವಾಕ್ ಅನುಪಯುಕ್ತವಾಗಿದ್ದು, ಸಂಬಧಪಟ್ಟ ಅಧಿಕಾರಿಗಳು ಮರುಚಿಂತನೆ ನಡೆಸಿ, ಹೆಚ್ಚಿನ ಜನರಿಗೆ ಪ್ರಯೋಜನವಾಗುವ ಸೂಕ್ತ ಸ್ಥಳಕ್ಕೆ ಈ ಯೋಜನೆಯನ್ನು ಸ್ಥಳಾಂತರಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಮೇಲ್ಸೇತುವೆ ಅಗತ್ಯ: ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸ್ಕೈವಾಕ್ ನಿರ್ಮಾಣವಾಗಬೇಕು. ರಸ್ತೆ ದಾಟುವ ಸಂದರ್ಭದಲ್ಲಿ ಸಮಸ್ಯೆ ಎದುರಿಸುತ್ತಿದ್ದು, ಅಪಾಯದ ಸಾಧ್ಯತೆ ಇದೆ. ಸಾರ್ವಜನಿಕರ ಹಾಗೂ ಮಕ್ಕಳ ಹಿತದೃಷ್ಟಿಯಿಂದ ರಸ್ತೆ ದಾಟಲು ಸುರಕ್ಷಿತ ವ್ಯವಸ್ಥೆ ಅಗತ್ಯವಾಗಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ತಮ್ಮ ವಿರೋಧವಿಲ್ಲ ಎಂದು ಎರ್ಮಾಳು ತೆಂಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಎಲ್ಲದಡಿ ತಿಳಿಸಿದ್ದಾರೆ.

ತಾತ್ಕಾಲಿಕ ಸ್ಥಗಿತಕ್ಕೆ ಸೂಚನೆ: ಈ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗೆ ಪತ್ರ ಬರೆದು ಸ್ಥಳೀಯ ನಿವಾಸಿಗಳ ಆಕ್ಷೇಪ ಹಾಗೂ ಸ್ಥಳೀಯರ ಅಭಿಪ್ರಾಯವನ್ನು ಪರಿಗಣಿಸಿ, ಎರ್ಮಾಳಿನಲ್ಲಿ ನಡೆ ಯುತ್ತಿರುವ ಕಾಮಗಾರಿಯನ್ನು ಸ್ಥಳೀಯ ಹಿತಾಸಕ್ತಿದಾರರು ಮತ್ತು ಜನಪ್ರತಿನಿಧಿಗಳೊಂದಿಗೆ ಮತ್ತಷ್ಟು ಸಮಾಲೋಚನೆ ನಡೆಸುವವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-28-1845308159

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.