ಭಾನುವಾರ, ಏಪ್ರಿಲ್ 18, 2021
24 °C
ಸಿದ್ದರಾಮಯ್ಯಗೆ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಸಲಹೆ

ವಿವಾದಿತ ರಾಮಮಂದಿರ ಎಂಬ ಪದ ಬಳಸಬೇಡಿ: ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಅಯೋಧ್ಯೆಯ ರಾಮಮಂದಿರ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಅಂತಿಮ ತೀರ್ಪು ನೀಡಿದ್ದರೂ ವಿವಾದಿತ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂಬ ಸಿದ್ದರಾಮಯ್ಯನವರ ಹೇಳಿಕೆ ನಾಚಿಕೆಗೇಡು ಎಂದು ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಭಾನುವಾರ ಪುರಾತತ್ವ ಶಾಸ್ತ್ರಜ್ಞ ಕೆ.ಕೆ.ಮೊಹಮ್ಮದ್ ಅವರಿಗೆ ಡಾ.ಗುರುರಾಜ ಭಟ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ‘ವಿವಾದಿತ ಜಾಗದಲ್ಲಿ ರಾಮಮಂದಿರ ಇತ್ತು ಎಂಬ ಬಗ್ಗೆ ಸಾಕಷ್ಟು ಪುರಾವೆಗಳು ಲಭ್ಯವಾಗಿವೆ. ಸುಪ್ರೀಂಕೋರ್ಟ್‌ನ ಐವರು ನ್ಯಾಯಾಧೀಶರು ಸಹಮತದ ತೀರ್ಪು ನೀಡಿದ್ದಾರೆ. ಇಷ್ಟಾದರೂ ಜಾಗವನ್ನು ವಿವಾದಿತ ಎನ್ನುವುದು ಸರಿಯಲ್ಲ. ರಾಮಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ ಎಂದು ಹೇಳಲಿ, ಆದರೆ, ‘ವಿವಾದಿತ’ ರಾಮಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ ಎಂಬ ಶಬ್ಧವನ್ನು ಬಳಸಬಾರದು ಎಂದು ವಿದ್ಯಾಧೀಶ ಸ್ವಾಮೀಜಿ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು