ಶುಕ್ರವಾರ, ಆಗಸ್ಟ್ 19, 2022
22 °C

ಗ್ರಾ.ಪಂ ಸ್ಥಾನ ಹರಾಜು ಹಾಕಿದರೆ ಕ್ರಿಮಿನಲ್ ಮೊಕದ್ದಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಬುಧವಾರ 606 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ತಾಲ್ಲೂಕು ವ್ಯಾಪ್ತಿಯಲ್ಲಿ 174, ಹೆಬ್ರಿ ವ್ಯಾಪ್ತಿಯಲ್ಲಿ 58, ಬೈಂದೂರು ತಾಲ್ಲೂಕು ವ್ಯಾಪ್ತಿಯಲ್ಲಿ 189, ಬ್ರಹ್ಮಾವರ ವ್ಯಾಪ್ತಿಯಲ್ಲಿ 185 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಗ್ರಾಮ ಪಂಚಾಯಿತಿ ಸ್ಥಾನಗಳನ್ನು ಬಹಿರಂಗ ಹರಾಜು ಹಾಕುತ್ತಿರುವ ಪ್ರಕರಣಗಳು ರಾಜ್ಯದ ಹಲವೆಡೆ ವರದಿಯಾಗಿದ್ದು, ಜಿಲ್ಲೆಯಲ್ಲಿ ಅಂತಹ ಕೃತ್ಯಗಳು ಕಂಡುಬಂದರೆ, ಭಾಗಿಯಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಂತೆ ಚುನಾವಣಾ ಆಯೋಗಕ್ಕೆ ಮಾಹಿತಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು