ಹೆಬ್ರಿ: ಇಲ್ಲಿನ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದಲ್ಲಿ ಪೋಷಕರ ಸಭೆ ಮತ್ತು ಸನ್ಮಾನ ಸಮಾರಂಭ ಸೋಮವಾರ ನಡೆಯಿತು.
‘ಸತತ ಪರಿಶ್ರಮ, ಛಲ ಇದ್ದಲ್ಲಿ ಯಶಸ್ಸು ಸುಲಭವಾಗಿ ಕೈಗೆಟಕುತ್ತದೆ’ ಎಂದು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಶಶಿಧರ್ ಹೇಳಿದರು.
2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಿತ್ಯಶ್ರೀ, ಪವಿತ್ರಾ ಹಾಗೂ ಮಹಿಮಾ ನಾಯಕ್ ಅವರನ್ನು ಸನ್ಮಾನಿಸಲಾಯಿತು. ವಿಷಯವಾರು ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಅಮೃತ ಭಾರತಿ ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ, ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ್ ಶೆಣೈ, ಯೋಗೀಶ್ ಭಟ್, ಮುಖ್ಯಶಿಕ್ಷಕಿ ಅಪರ್ಣಾ ಆಚಾರ್ ಇದ್ದರು. ಮಹೇಶ್ ಹೈಕಾಡಿ ನಿರೂಪಿಸಿದರು. ಶ್ವೇತಾ ನಾಯಕ್ ವಂದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.