ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಜತೆ ಉಡುಪಿ ವಿದ್ಯಾರ್ಥಿನಿ ಸಂವಾದ ಏ.7ರಂದು

ಅಲ್ಬಾಡಿ ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಶಾಲೆಯಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ
Last Updated 6 ಏಪ್ರಿಲ್ 2021, 15:40 IST
ಅಕ್ಷರ ಗಾತ್ರ

ಉಡುಪಿ: ಪ್ರಧಾನಮಂತ್ರಿಗಳ ‘ಪರೀಕ್ಷಾ ಪೇ ಚರ್ಚಾ’ ವರ್ಚುವಲ್ ಆವೃತ್ತಿಯ ಸಂವಾದ ಕಾರ್ಯಕ್ರಮ ಏ.7ರಂದು ರಾತ್ರಿ 7ಕ್ಕೆ ಕುಂದಾಪುರ ತಾಲ್ಲೂಕಿನ ಅಲ್ಬಾಡಿ ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಶಾಲೆಯ ವಿದ್ಯಾರ್ಥಿನಿ ಅನುಷಾ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಟಿವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರವಾಗಲಿದೆ. http//education.gov.in ವೆಬ್‌ಸೈಟ್‌ನಲ್ಲಿಯೂ ವೀಕ್ಷಣೆ ಮಾಡಲು ಅವಕಾಶವಿದ್ದು, ಜಿಲ್ಲೆಯ 6ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಪ್ರೋತ್ಸಾಹಿಸುವಂತೆ ಡಿಡಿಪಿಐ ಎನ್‌.ಎಚ್‌.ನಾಗೂರ ಎಲ್ಲ ತಾಲ್ಲೂಕುಗಳ ಬಿಇಒಗಳಿಗೆ ಸೂಚನೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ನೀಡುವ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನವನ್ನು ಶಾಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಮಂಗಳವಾರ ಅಲ್ಬಾಡಿ ಆರ್ಡಿಯ ಶಾಲೆಗೆ ಭೇಟಿನೀಡಿದ ಡಿಡಿಪಿಐ ನಾಗೂರ, ವಿದ್ಯಾರ್ಥಿನಿ ಅನುಷಾ ಜತೆ ಚರ್ಚಿಸಿದರು. ಇದೇವೇಳೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಧ್ಯಯನ ಕ್ರಮ ಹಾಗೂ ಶಿಕ್ಷಣದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡಿದರು.

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ 2 ಶಾಲೆಗಳ ವಿದ್ಯಾರ್ಥಿಗಳು ಮಾತ್ರ ಅವಕಾಶ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT