ಉಡುಪಿ: ಪರ್ಯಾಯದ ಕಾರಣ ಸುಮಾರು ₹6 ಕೋಟಿ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವೆ, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.

ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗೆ ಸಚಿವೆ ನಿರ್ದೇಶನ ನೀಡಿದರು.

ವಿಡಿಯೋ ಸಂವಾದದಲ್ಲಿ ಶಾಸಕರಾದ ಸುನಿಲ್ಕುಮಾರ್, ಕಿರಣಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳಿ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.