ಸೋಮವಾರ, ಆಗಸ್ಟ್ 15, 2022
27 °C

ವಿಶ್ವೇಶತೀರ್ಥ ಶ್ರೀಗಳ ವೃಂದಾವನ ಸನ್ನಿಧಿಯಲ್ಲಿ ಸಾಧು ಸಂಗಮ ಜುಲೈ 1

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿರುವ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ವೃಂದಾವನ ಸನ್ನಿಧಿಯಲ್ಲಿ ಜುಲೈ 1ರಂದು ಬೆಳಿಗ್ಗೆ 10.30ಕ್ಕೆ ಸಾಧು ಸಂಗಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕರಾವಳಿ ಭಾಗದ ಬೈಲೂರು ಮಠ ರಾಮಕೃಷ್ಣಾಶ್ರಮದ ಸ್ವಾಮಿ ವಿನಾಯಕಾನಂದಜೀ, ಗುರುದೇವ ದತ್ತ ಸಂಸ್ಥಾನ ಒಡಿಯೂರು ಗುರುದೇವಾನಂದ ಸ್ವಾಮೀಜಿ, ಪಡುಕುತ್ಯಾರು ಆನೆಗುಂದಿ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ಬೆಂಗಳೂರು ಆರ್ಯ ಈಡಿಗ ಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸ್ವಾಮೀಜಿ, ಮೂಡಬಿದಿರೆ ಶ್ರೀಕ್ಷೇತ್ರ ಕರಿಂಜದ ಮುಕ್ತಾನಂದ ಸ್ವಾಮೀಜಿ, ಮಂಗಳೂರು ರಾಮಕೃಷ್ಣಾಶ್ರಮದ ಸ್ವಾಮಿ ರಘುರಾಮಾನಂದಜೀ ಧರ್ಮಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪೇಜಾವರ ಮಠದ ವಿಶ್ವಪಸನ್ನ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಪೂರ್ಣಪ್ರಜ್ಞ ವಿದ್ಯಾಪೀಠದ ಸಂಶೋಧನಾ ಕೇಂದ್ರದ ನಿರ್ದೇಶಕ ವಿದ್ವಾನ್ ಆನಂದತೀರ್ಥ ನಾಗಸಂಪಿಗೆ, ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ ಅಭಿವಂದನಾ ಭಾಷಣ ಮಾಡಲಿದ್ದರೆ ಎಂದು ಪೇಜಾವರ ಮಠ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.