ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ಉತ್ಸವ ನಡೆಯಲಿ

ಯೋಗಿ ಆದಿತ್ಯನಾಥ್‌ಗೆ ಮನವಿ ಸಲ್ಲಿಸಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
Last Updated 21 ಫೆಬ್ರುವರಿ 2021, 16:31 IST
ಅಕ್ಷರ ಗಾತ್ರ

ಉಡುಪಿ: ಅಯೋಧ್ಯೆಯಲ್ಲಿ ರಾಮನವಮಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ಪೇಜಾವರ ಮಠದ ಸ್ವಾಮೀಜಿ ಹಾಗೂ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರೂ ಆಗಿರುವ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾನುವಾರ ಮಂಗಳೂರಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಹೇಳಿದರು.

ರಾಮಮಂದಿರ ನಿರ್ಮಾಣವಾಗುತ್ತಿರುವ ವಿಶೇಷ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ 9 ದಿನಗಳ ಕಾಲ ರಾಮನವಮಿ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಬೇಕು. ಈ ಅವಧಿಯಲ್ಲಿ ರಾಮಾಯಣ ಕುರಿತಾದ ಚಿಂತನಾ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸ್ವಾಮೀಜಿ ಮನವಿ ಮಾಡಿದರು.

ಶ್ರೀಗಳ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಯೋಗಿ ಆದಿತ್ಯನಾಥ್‌, ಶೀಘ್ರ ಸಮಾಲೋಚನಾ ಸಭೆ ಕರೆದು ಅದ್ಧೂರಿ ರಾಮನವಮಿ ಉತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದೇವೇಳೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೂಯೋಗಿ ಆದಿತ್ಯನಾಥ್ ಅವರನ್ನು ಭೇಟಿಮಾಡಿ ‘ಕರ್ನಾಟಕದಿಂದ ಅಯೋಧ್ಯೆಗೆ ಬರುವ ಭಕ್ತರ ಅನುಕೂಲಕ್ಕೆ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಿಸಲು 5 ಎಕರೆ ಭೂಮಿ ಮಂಜೂರು ಮಾಡುವಂತೆ ಹಿಂದೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸುವಂತೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಆದಿತ್ಯನಾಥ್‌ ಭೂಮಿ ಮಂಜೂರಿಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು ಎಂದು ಮಠದ ವಾಸುದೇವ ಭಟ್‌ ಪೆರಂಪಳ್ಳಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT