ಬುಧವಾರ, ಜೂನ್ 23, 2021
22 °C

ಶಿಲಾನ್ಯಾಸಕ್ಕೆ ಪೇಜಾವರ ಶ್ರೀಗಳಿಗೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಅಯೋಧ್ಯೆಯಲ್ಲಿ ಆ.5ರಂದು ನಡೆಯುವ ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ಪೇಜಾವರ ಶ್ರೀಗಳು ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ ಸದಸ್ಯರೂ ಆಗಿದ್ದಾರೆ. ಸದ್ಯ ನೀಲಾವರದಲ್ಲಿರುವ ಮಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಕಾರಣ ಶ್ರೀಗಳು ಶಿಲಾನ್ಯಾಸ ಕಾರ್ಯಕ್ರಮಕ್ಕೆ ತೆರಳುತ್ತಿಲ್ಲ. ಚಾತುರ್ಮಾಸ್ಯ ಮುಗಿದ ಬಳಿಕ ಅಯೋಧ್ಯೆಗೆ ಭೇಟಿನೀಡಲಿದ್ದಾರೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಜ್ಯದಿಂದ ಧರ್ಮಸ್ಥಳ ಧರ್ಮಾಧಿಕಾರಿಯಾಗಿರುವ ವೀರೇಂದ್ರ ಹೆಗ್ಗಡೆ, ಆದಿ ಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ ಸೇರಿದಂತೆ ಶೃಂಗೇರಿ ಮಠದ ಶ್ರೀ ಹಾಗೂ ಸುತ್ತೂರು ಶ್ರೀಗಳಿಗೆ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.‌

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು