ಮಂಗಳವಾರ, ಡಿಸೆಂಬರ್ 1, 2020
18 °C

ರಾಮಲಲ್ಲಾನಿಗೆ ಪೇಜಾವರ ಸ್ವಾಮೀಜಿ ಚಾಮರ ಸೇವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಅಯೋಧ್ಯೆ ಪ್ರವಾಸದಲ್ಲಿರುವ ಪೇಜಾವರ ಮಠದ ಯತಿ ಹಾಗೂ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರೂ ಆಗಿರುವ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೋಮವಾರ ರಾಮಲಲ್ಲಾ ಮೂರ್ತಿಯ ದರ್ಶನ ಪಡೆದು ಚಾಮರಸೇವೆ ಸಲ್ಲಿಸಿದರು.

ದೇವಸ್ಥಾನದ ಪ್ರಧಾನ ಅರ್ಚಕರು ಪೂಜೆ, ಪುನಸ್ಕಾರಗಳ ಬಗ್ಗೆ ಶ್ರೀಗಳಿಗೆ ಮಾಹಿತಿ ನೀಡಿದರು. ಕೆಲಹೊತ್ತು ರಾಮನ ಮುಂದೆ ಪ್ರಾರ್ಥನೆ ಸಲ್ಲಿಸಿದ ಶ್ರೀಗಳು, ಮಂಗಳಾರತಿ ಸ್ವೀಕರಿಸಿದರು. ಬಳಿಕ ಮಂದಿರ ನಿರ್ಮಾಣಕ್ಕಾಗಿ ಸಿದ್ಧಪಡಿಸಿರುವ ಸ್ಥಂಭಗಳನ್ನು ವೀಕ್ಷಿಸಿ, ಟ್ರಸ್ಟ್‌ ಕಾರ್ಯಾಲಯಕ್ಕೆ ಭೇಟಿ ನೀಡಿದರು.

ಭಾನುವಾರ ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿ, ಸಂಜೆ ನಡೆದ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಸಭೆಯಲ್ಲಿ ಪೇಜಾವರ ಸ್ವಾಮೀಜಿ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು