ಶುಕ್ರವಾರ, ಡಿಸೆಂಬರ್ 4, 2020
24 °C

ಪತಂಜಲಿ ಯೋಗಪೀಠಕ್ಕೆ ಪೇಜಾವರ ಶ್ರೀ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಹರಿದ್ವಾರದಲ್ಲಿರುವ ಪ್ರಸಿದ್ಧ ಪತಂಜಲಿ ಯೋಗಪೀಠಕ್ಕೆ ಸೋಮವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿದರು.

ಈ ಸಂದರ್ಭ ಯೋಗಗುರು ಬಾಬಾ ರಾಮ್‌ದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಗೌರವಿಸಿದರು.

ಪತಂಜಲಿ ಆಯುರ್ವೇದ ಆಸ್ಪತ್ರೆ, ಆಯುರ್ವೇದ ವನ, ಪತಂಜಲಿ ಉತ್ಪನ್ನಗಳ ಮಳಿಗೆ ಸೇರಿದಂತೆ ಯೋಗ ಪೀಠದ ಹಲವು ವಿಭಾಗಗಳಿಗೆ ಭೇಟಿನೀಡಿದ ಶ್ರೀಗಳು ಮಾಹಿತಿ ಪಡೆದುಕೊಂಡರು.

ಕನ್ಯಾಡಿ ರಾಮಕ್ಷೇತ್ರದ ಹರಿದ್ವಾರದ ಶಾಖೆಗೂ ತೆರಳಿ ಆಶ್ರಮದಲ್ಲಿ ಕೆಲಹೊತ್ತು ಕಾಲ ಕಳೆದರು. ಕ್ಷೇತ್ರದ ವ್ಯವಸ್ಥಾಪಕ ನರೇಂದ್ರ ಜೀ ಅವರೊಂದಿಗೆ ಮಾತುಕತೆ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು