ಮಂಗಳವಾರ, ಆಗಸ್ಟ್ 16, 2022
27 °C

ರಾಜ್ಯಪಾಲರನ್ನು ಭೇಟಿಮಾಡಿದ ಪೇಜಾವರ ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ರಾಜಭವನದಲ್ಲಿ ಬುಧವಾರ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿದರು.

ಅಯೋಧ್ಯೆಯ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಸಮಸ್ತರ ಬೆಂಬಲ ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿ ನಿರತರಾಗಿರುವ ಸ್ವಾಮೀಜಿ, ರಾಜ್ಯಪಾಲರನ್ನು ಭೇಟಿಮಾಡಿ ಮನವಿ ಪತ್ರ ಅರ್ಪಿಸಿದರು. ಕೆಲಹೊತ್ತು ಸಮಾಲೋಚನೆ ನಡೆಸಿದರು.

ಅಯೋಧ್ಯೆ ಆಂದೋಲನದ ವಿವಿಧ ಹಂತಗಳಲ್ಲಿ ಪಾಲ್ಗೊಂಡಿದ್ದನ್ನು ಸ್ಮರಿಸಿದ ರಾಜ್ಯಪಾಲರು ರಾಮಮಂದಿರ ನಿರ್ಮಾಣ ಕಾರ್ಯವನ್ನು ಬೆಂಬಲಿಸುವುದಾಗಿ ಶ್ರೀಗಳಿಗೆ ತಿಳಿಸಿದರು.

ವಿಶ್ವ ಹಿಂದೂ ಪರಿಷತ್‌ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ, ಶ್ರೀಗಳ ಆಪ್ತ ಕಾರ್ಯದರ್ಶಿ ವಿಷ್ಣು ಆಚಾರ್ಯ, ಕೃಷ್ಣಮೂರ್ತಿ ಭಟ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು