ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಸಂಕ್ರಾತಿ ವೇಳೆಗೆ ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠೆ: ಪೇಜಾವರ ಮಠ

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
Last Updated 16 ಜನವರಿ 2023, 12:31 IST
ಅಕ್ಷರ ಗಾತ್ರ

ಉಡುಪಿ: 2024ರ ಮಕರ ಸಂಕ್ರಾಂತಿ ವೇಳೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದಲ್ಲಿ ರಾಮ ದೇವರ ಪ್ರತಿಷ್ಠಾ ಕಾರ್ಯ ನೆರವೇರಲಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ಆಯೋಧ್ಯೆ ಶ್ರೀರಾಮ ಸೇವಾ ಸಂಕಲ್ಪ ಅಭಿಯಾನಕ್ಕೆ ಶ್ರೀಗಳು ಚಾಲನೆ ನೀಡಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ರಾಮದೇವರ ಪ್ರತಿಷ್ಠಾ ಕಾರ್ಯದ ಅಂಗವಾಗಿ 1 ವರ್ಷ ದೇಶವ್ಯಾಪಿ ವಿವಿಧ ಸೇವಾ ಕೈಂಕರ್ಯಗಳನ್ನು ನಡೆಯಲಿದೆ ಎಂದು ತಿಳಿಸಿದರು.

ದೇವರ ಭಕ್ತಿ ಹಾಗೂ ದೇಶ ಭಕ್ತಿ ಬೇರೆ ಬೇರೆಯಲ್ಲ. ಹುಂಡಿಯಲ್ಲಿ ಹಾಕಿದ ಕಾಣಿಕೆಯನ್ನು ಸರ್ಕಾರ ಅನ್ಯಕಾರ್ಯಗಳಿಗೆ ವಿನಿಯೋಗಿಸುತ್ತದೆ ಎಂದು ದೂರುವ ಬದಲು ಸಮಾಜದ ದೀನ–ದಲಿತರು, ದುರ್ಬಲರಿಗೆ, ಅಶಕ್ತರಿಗೆ ಸಹಾಯ ಮಾಡುವ ಮೂಲಕ ದೇವರಿಗೆ ಸೇವೆ ಸಲ್ಲಿಸಬೇಕು ಎಂದರು.

ಮನೆ ಇಲ್ಲದವರಿಗೆ ಸೂರು ಒದಗಿಸುವುದು, ಅನಾರೋಗ್ಯ ಪೀಡಿತರಿಗೆ ನೆರವು ನೀಡುವುದು, ಬಡ ವಿದ್ಯಾರ್ಥಿಗಳನ್ನು ಹಾಗೂ ಗೋವುಗಳನ್ನು ದತ್ತು ತೆಗೆದುಕೊಳ್ಳುವುದು, ರಾಮಾಯಣದ ಉಪನ್ಯಾಸ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಸೇರಿದಂತೆ ಇತರ ಸೇವಾ ಚಟುವಟಿಕೆಗಳನ್ನು ಕೈಗೊಳ್ಳಲು ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಸೇವಾ ಚಟುವಟಿಕೆಗಳನ್ನು ಕ್ರೋಢೀಕರಿಸುವ ನಿಟ್ಟಿನಲ್ಲಿ ಆ್ಯಪ್ ರೂಪಿಸಿ ಸಾರ್ವಜನಿಕರು ವಿವರಗಳನ್ನು ದಾಖಲಿಸಬೇಕು. ಮಂದಿರ ನಿರ್ಮಾಣವಾದ ಬಳಿಕ ಎಲ್ಲ ದಾಖಲೆಗಳನ್ನು ರಾಮದೇವರಿಗೆ ಸಮರ್ಪಣೆ ಮಾಡಬಹುದು ಎಂದರು.

ಕಾರ್ಯಕ್ರಮಲ್ಲಿ ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ, ಶಾಸಕ ಕೆ.ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಡಿಯಾಳಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ರವಿರಾಜ ಆಚಾರ್ಯ, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಇದ್ದರು. ವಾಸುದೇವ ಭಟ್ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT