ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರಿ ಪಂಡಿತರ ರಕ್ಷಿಸಿ: ಪೇಜಾವರ ಸ್ವಾಮೀಜಿ

Last Updated 17 ಆಗಸ್ಟ್ 2022, 5:14 IST
ಅಕ್ಷರ ಗಾತ್ರ

ಉಡುಪಿ: ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಹತ್ಯಾಕಾಂಡ ಮುಂದುವರಿದಿರುವುದು ತೀವ್ರ ಕಳವಳಕಾರಿ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ತಿಳಿಸಿದ್ದಾರೆ.

ಈಚೆಗೆ ಹಿಂದೂ ಸಹೋದರರ ಮೇಲೆ ಪೈಶಾಚಿಕ ಹಲ್ಲೆ ನಡೆಸಲಾಗಿದ್ದು ಘಟನೆಯಲ್ಲಿ ಓರ್ವ ಮೃತಪಟ್ಟು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಈ ಹತ್ಯೆ ಅತ್ಯಂತ ಖಂಡನಾರ್ಹವಾಗಿದ್ದು ಕೇಂದ್ರ ಸರ್ಕಾರ ಇಂತಹ ಪೈಶಾಚಿಕ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಕಾಶ್ಮೀರಿ ಪಂಡಿತರ ರಕ್ಷಣೆಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಅಥವಾ ಪಂಡಿತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ಮತ್ತೆ ಕೋಮು ಸಂಘರ್ಷ ಉಂಟಾಗಿರುವುದು ತೀವ್ರ ಖೇದಕರವಾಗಿದೆ. ಸಮಾಜದ ಶಾಂತಿ ಕದಡುವ ದುಷ್ಕರ್ಮಿಗಳಿಗೆ ಕಠಿಣ ಕಾನೂನಿನ ಅಂಕುಶ ಹಾಕಬೇಕು. ಸಾರ್ವಜನಿಕರು ಶಾಂತಿ ಕಾಪಾಡಬೇಕು. ಹಲ್ಲೆಗೊಳಗಾಗಿರುವ ಪ್ರೇಮ್‌ ಸಿಂಗ್ ಶೀಘ್ರ ಗುಣಮುಖನಾಗುವಂತೆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಪೇಜಾವರ ಶ್ರೀಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT