ಮಂಗಳವಾರ, ಜನವರಿ 31, 2023
18 °C

ಪೇಜಾವರ ಶ್ರೀ ಸಂತಾಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಸಿದ್ದೇಶ್ವರ ಸ್ವಾಮೀಜಿ ಅವರ ನಿಧನ ತಿಳಿದು ವಿಷಾದವಾಗಿದೆ.‌ ವೈಕುಂಠ ಏಕಾದಶಿಯ ಪರ್ವದಿನದ ಅಗಲಿಕೆ ಅವರ ಜೀವನ ಸಾರ್ಥಕ್ಯಕ್ಕೆ ಕನ್ನಡಿಯಂತಿದೆ.

ಸರಳತೆಗೆ ಪರ್ಯಾಯ ಎಂಬಂತಿದ್ದ ಸಿದ್ದೇಶ್ವರ ಸ್ವಾಮೀಜಿ ಆಡಂಬರದ ಸ್ಪರ್ಶವಿಲ್ಲದೆ ವಿರಕ್ತ ಜೀವನ ನಡೆಸುವವರಿಗೆ ಮಾದರಿಯಾಗಿದ್ದರು. ಸೇವಾ ಕಾರ್ಯ ಹಾಗೂ ಮಾರ್ಗದರ್ಶನದ ಮೂಲಕ ಅಸಂಖ್ಯ ಜನರ ದುಃಖ ದುಮ್ಮಾನಗಳಿಗೆ ಸಾಂತ್ವನ ಸಮಾಧಾನ ನೀಡುತ್ತ ದಾರಿ ಬೆಳಕಾಗಿದ್ದರು. ಋಷಿ ಪರಂಪರೆಯ ಅಮೂಲ್ಯ ಕೊಂಡಿ ಕಳಚಿರುವುದಕ್ಕೆ ತೀವ್ರ ವಿಷಾದವಾಗಿದೆ. ಸಿದ್ಧೇಶ್ವರ ಸ್ವಾಮೀಜಿ ಅವರ ಆತ್ಮಕ್ಕೆ ಶ್ರೀಕೃಷ್ಣನು ಸದ್ಗತಿ ಕರುಣಿಸಲಿ

– ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪೇಜಾವರ ಮಠ ಉಡುಪಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.