ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ
ಪ್ರಬಲ ಗೋಹತ್ಯಾ ನಿಷೇಧ ಕಾಯ್ದೆ ಅಗತ್ಯ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ: ರಾಜ್ಯದಲ್ಲಿ ನಿರಂತರ ಗೋಹತ್ಯೆ, ಗೋವುಗಳ ಕಳವು ನಡೆಯುತ್ತಿದ್ದು ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ. ಇಂತಹ ಕೃತ್ಯಗಳ ತಡೆಗೆ ಗೋಹತ್ಯಾ ನಿಷೇಧ ಕಾಯ್ದೆಯನ್ನು ಬಲಗೊಳಿಸಬೇಕಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಗೋವುಗಳ ಹತ್ಯೆ ತಡೆಗೆ ಪ್ರಬಲ ಕಾನೂನಿನ ಅವಶ್ಯಕತೆಯಿದ್ದು, ಸರ್ಕಾರ ಗೋಹತ್ಯಾ ನಿಷೇಧ ಕಾಯ್ದೆಯನ್ನು ಬಲಗೊಳಿಸಿ ಪ್ರಸಕ್ತ ಅಧಿವೇಶನದಲ್ಲಿ ಮಂಡಿಸಬೇಕು ಎಂದು ಪೇಜಾವರ ಸ್ವಾಮೀಜಿ ಒತ್ತಾಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.