ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆಗಳ ಅನುಷ್ಠಾನಕ್ಕೆ ಜನರ ಸಹಭಾಗಿತ್ವ ಅಗತ್ಯ: ಪ್ರಶಾಂತ ರಾವ್

Published 1 ಡಿಸೆಂಬರ್ 2023, 12:54 IST
Last Updated 1 ಡಿಸೆಂಬರ್ 2023, 12:54 IST
ಅಕ್ಷರ ಗಾತ್ರ

ಬ್ರಹ್ಮಾವರ: ‘ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯಂತಹ ಉತ್ತಮ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಆಡಳಿತ ವರ್ಗದೊಂದಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಿದೆ’ ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಪ್ರಶಾಂತ ರಾವ್ ಹೇಳಿದರು.

ಕಾಡೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕ ಆಯವ್ಯಯ ರೂಪಿಸುವ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.

‘ಕೃಷಿ, ತೋಟಗಾರಿಕೆ, ಅರಣ್ಯ ಸೇರಿದಂತೆ ವಿವಿಧ ಯೋಜನೆಯ ಅನುಷ್ಠಾನವನ್ನು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ವೈಯಕ್ತಿಕ ಮತ್ತು ಸಾಮೂಹಿಕ ಕಾಮಗಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮನರೇಗಾ ಯೋಜನಾ ವ್ಯವಸ್ಥಾಪಕ ವಿಜಯಶ್ಯಾಮ ಮಾತನಾಡಿ, ‘ಮನರೇಗಾ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪಾರದರ್ಶಕತೆಯನ್ನು ಕಾಪಾಡಲು ತಂತ್ರಾಂಶ ಆಧಾರಿತವಾಗಿ ಅನುಷ್ಠಾನ ಮಾಡಲಾಗುತ್ತಿದ್ದು ನಾಗರಿಕರು ಸಹಕರಿಸಬೇಕು’ ಎಂದು ಹೇಳಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ. ಮಾತನಾಡಿದರು.

ಸಹಾಯಕ ತೋಟಗಾರಿಕೆ ಅಧಿಕಾರಿ ರಾಹುಲ್, ಕೃಷಿ ಇಲಾಖೆಯ ಸುರೇಶ್ ಇಲಾಖೆಯ ಮಾಹಿತಿ ನೀಡಿದರು.

ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ನವೀನ್, ಕಾಡೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಜಲಂಧರ್ ಶೆಟ್ಟಿ, ಉಪಾಧ್ಯಕ್ಷೆ ಪ್ರಭಾವತಿ, ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಎಸ್.ಎಲ್.ಆರ್.ಎಂ ಮತ್ತು ಪಂಚಾಯಿತಿ ಸಿಬ್ಬಂದಿ ಹಾಗೂ ಯೋಜನಾ ಫಲಾನುಭವಿಗಳು ಮತ್ತು ನಾಗರಿಕರು ಇದ್ದರು.

ನರೇಗಾ ಯೋಜನೆಯಡಿ ಕೆರೆ-ಮದಗ ಹಾಗೂ ತೋಡು ಹೂಳೆತ್ತಲು ಕ್ರಮ ಅಂತರ್ಜಲ ಅಭಿವೃದ್ಧಿಗೆ ಸಹಕಾರಿ ಯೋಜನೆಯಲ್ಲಿ ಸಾರ್ವಜನಿಕರ ಸಹಯೋಗ ಅಗತ್ಯ
ಉಡುಪಿ ಬ್ರಹ್ಮಾವರ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅರಣ್ಯೀಕರಣಕ್ಕೆ ಉತ್ತಮ ಅವಕಾಶಗಳಿದ್ದು ಪಂಚಾಯಿತಿ ಹಂತದಲ್ಲಿ ಕೂಲಿಕಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗುರುತಿಸಿಕೊಟ್ಟಲ್ಲಿ ಕಾಮಗಾರಿಗಳ ಅನುಷ್ಠಾನ ಸುಲಭ ಸಾಧ್ಯ
ನವೀನ್‌ ಉಡುಪಿ ಸಾಮಾಜಿಕ ಅರಣ್ಯ ವಿಭಾಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT