ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆಯಿಂದ ಸರ್ವ ಸಮಸ್ಯೆ ನಿವಾರಣೆ: ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಜನಪ್ರತಿನಿಧಿಗಳ ಕ್ರೀಡಾಕೂಟ ‘ಹೊಳಪು’ಗೆ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಚಾಲನೆ
Last Updated 26 ನವೆಂಬರ್ 2022, 11:37 IST
ಅಕ್ಷರ ಗಾತ್ರ

ಕೋಟ(ಬ್ರಹ್ಮಾವರ): ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಎಲ್ಲ ರೀತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.

ಕೋಟ ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ಶನಿವಾರ ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಕೋಟ ಡಾ.ಶಿವರಾಮ ಕಾರಂತ ಪ್ರತಿಷ್ಠಾನದ ಸಹಯೋಗದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್‍ರಾಜ್ ಮತ್ತು ನಗರ ಸ್ಥಳೀಯ ಆಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆ ‘ಹೊಳಪು’ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವ್ಯಕ್ತಿಗೆ ಎಲ್ಲ ರೀತಿಯ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳ ನಿವಾರಣೆ ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳನ್ನು ಎದುರಿಸಲು ಅಗತ್ಯವಿರುವ ಶಕ್ತಿಯನ್ನು ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಡೆಯಬಹುದಾಗಿದೆ. ನಿರಂತರ ಇಂತಹ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕ್ರೀಡೆಯ ಮೂಲಕ ಸಮರ್ಥವಾಗಿ ನೀಡಬಹುದಾಗಿದ್ದು, ಸಂವಿಧಾನದ ಆಶಯಗಳಿಗೆ ಎಲ್ಲರೂ ಬದ್ಧರಾಗಿರಬೇಕು ಎಂದರು.

‘ಜನಪ್ರತಿನಿಧಿಗಳ ಪಥ ಸಂಚಲನ ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ತೋರಿಸಿಕೊಟ್ಟಿದೆ. ಇಂತಹ ಚಟುವಟಿಕೆಗಳಿಂದಲೇ ನಮ್ಮ ಜೀವನವನ್ನು ರೂಪಿಸಲು ಸಾಧ್ಯ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ’ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಪಥಸಂಚಲನದ ಗೌರವ ಸ್ವೀಕರಿಸಿದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಕ್ರೀಡಾಕೂಟದ ಪಥಸಂಚಲನಕ್ಕೆ ಚಾಲನೆ ನೀಡಿದರು. ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಕ್ರೀಡಾ ಪ್ರತಿಜ್ಞಾ ವಿಧಿ ಭೋಧಿಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು.

ಸಂವಿಧಾನ ದಿನದ ಪ್ರಯುಕ್ತ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಸಂವಿಧಾನ ದಿನದ ಮಹತ್ವ ತಿಳಿಸಿ, ಪ್ರಮಾಣ ವಚನ ಬೋಧಿಸಿದರು.

ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಶ್ವಿನಿ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅತ್ಯುತ್ತಮ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ವಿತರಿಸಿದರು. ಸಚಿವ ಡಾ. ಅಶ್ವತ್ಥ ನಾರಾಯಣ ಅವರನ್ನು ಕೋಟ ವಿದ್ಯಾ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಕಡೂರಿನ ಮಾಜಿ ಶಾಸಕ ವೈ.ಎಸ್‌.ವಿ ದತ್ತ, ಕೋಟ ವಿವೇಕ ಪಿಯು ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ, ಪ್ರಮುಖರಾದ ಗೀತಾಂಜಲಿ ಸುವರ್ಣ, ಕೊಲ್ಲೂರು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಉಡುಪಿ ಆದರ್ಶ ಆಸ್ಪತ್ರೆಯ ಡಾ.ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್. ಪ್ರಸನ್ನ, ಬೆಂಗಳೂರು ವಿ.ವಿ. ಕುಲಪತಿ ಡಾ.ಜಯಕರ ಶೆಟ್ಟಿ ಇದ್ದರು. ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ್ ಸಿ ಕುಂದರ್ ಸ್ವಾಗತಿಸಿದರು. ಪಿಡಿಒ ಜಯರಾಂ ಶೆಟ್ಟಿ ವಂದಿಸಿದರು. ನರೇಂದ್ರ ಕುಮಾರ್ ಕೋಟ, ಸತೀಶ್ಚಂದ್ರ ಶೆಟ್ಟಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT