ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಪಿಸ್ತೂಲಿನಿಂದ ಗುಂಡು ಹಾರಿ ವ್ಯಕ್ತಿಗೆ ಗಾಯ

Published 30 ಡಿಸೆಂಬರ್ 2023, 16:05 IST
Last Updated 30 ಡಿಸೆಂಬರ್ 2023, 16:05 IST
ಅಕ್ಷರ ಗಾತ್ರ

ಉಡುಪಿ: ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ಸ್‌ ಬಟ್ಟೆ ಮಾರಾಟ ಅಂಗಡಿಯಲ್ಲಿ ಆಕಸ್ಮಿಕವಾಗಿ ಪಿಸ್ತೂಲಿನಿಂದ ಗುಂಡು ಸಿಡಿದು ಒರ್ವ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಯಲಬುರ್ಗಪ್ಪ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:

ಶನಿವಾರ ಮಧ್ಯಾಹ್ನ ಬಟ್ಟೆ ಅಂಗಡಿಗೆ ಬಂದಿದ್ದ ಗ್ರಾಹಕರೊಬ್ಬರು ಶೌಚಾಲಯಕ್ಕೆ ತೆರಳಿದ್ದು ಅಲ್ಲಿಯೇ ಪಿಸ್ತೂಲು ಮರೆತು ಹೋಗಿದ್ದಾರೆ. ಶೌಚಾಲಯ ಸ್ವಚ್ಛಗೊಳಿಸುವ ಸಿಬ್ಬಂದಿ ಪಿಸ್ತೂಲನ್ನು ಗಮನಿಸಿ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಸಂದರ್ಭ ಅಚಾನಕ್ಕಾಗಿ ಟ್ರಿಗರ್ ಪ್ರೆಸ್‌ ಮಾಡಿದಾಗ ಎದುರಿನಲ್ಲಿದ್ದ ಸ್ವಚ್ಛತಾ ಸಿಬ್ಬಂದಿಯ ತೋಳಿಗೆ ಗುಂಡು ತಾಗಿದೆ.

ಪಿಸ್ತೂಲು ಪರವಾನಗಿ ಹೊಂದಿರುವ ವ್ಯಕ್ತಿಯನ್ನು ಪತ್ತೆಹಚ್ಚಲಾಗಿದ್ದು ಆತನ ವಿರುದ್ಧ ಹಾಗೂ ಬಟ್ಟೆ ಅಂಗಡಿ ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT