ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ತರಬೇತಿ ಮಹತ್ವದ್ದು

ಶಿರ್ವ ಸೇಂಟ್ ಮೇರಿ ಕಾಲೇಜಿನಲ್ಲಿ ಕಾರ್ಯಾಗಾರ
Last Updated 10 ನವೆಂಬರ್ 2022, 4:44 IST
ಅಕ್ಷರ ಗಾತ್ರ

ಶಿರ್ವ: ವಿದ್ಯಾರ್ಥಿಗಳ ವೃತ್ತಿಜೀವನದ ಗುರಿಗಳನ್ನು ರೂಪಿಸುವಲ್ಲಿ ಉದ್ಯೋಗ ತರಬೇತಿ ಪ್ರಮುಖ ಪಾತ್ರ ವಹಿಸುತ್ತದೆ. ನೇಮಕಾತಿಗಾಗಿ ತಮ್ಮ ಕ್ಯಾಂಪಸ್‍ಗೆ ಭೇಟಿ ನೀಡುವ ಉನ್ನತ ಸಂಸ್ಥೆಯಲ್ಲಿ ಸ್ಥಾನ ಪಡೆಯುವುದು ಪ್ರತಿಯೊಬ್ಬ ಕಂಪ್ಯೂಟರ್ ಪದವಿ ವಿದ್ಯಾರ್ಥಿಯ ಕನಸಾಗಿದೆ. ಈ ಪ್ರಮುಖ ಅಂಶವನ್ನು ಪರಿಗಣಿಸಿ, ಪದವಿ ವಿದ್ಯಾರ್ಥಿಗಳಿಗೆ ತಮ್ಮ ಉದ್ಯೋಗ ಕೌಶಲ ಹೆಚ್ಚಿಸಲು ಮತ್ತು ವಿವಿಧ ಉದ್ಯಮಗಳಲ್ಲಿ ಉತ್ತಮ ಉದ್ಯೋಗವನ್ನು ಸಾಧಿಸಲು ತರಬೇತಿ ಮುಖ್ಯವಾಗಿದೆ ಎಂದು ಮಿಜಾರ್ ಮೈಟ್ ಕಾಲೇಜು ಸಹಾಯಕ ಪ್ರಾಧ್ಯಾಪಕ ಅಕ್ಷತಾರಾಜ್ ಜೈನ್ ತಿಳಿಸಿದರು.

ಶಿರ್ವ ಸೇಂಟ್ ಮೇರಿ ಮೇರಿ ಮಹಾವಿದ್ಯಾಲಯ ಮತ್ತು ಮಿಜಾರು ಮೈಟ್ ಕಾಲೇಜು ವತಿಯಿಂದ ಗಣಕ ವಿಜ್ಞಾನ ವಿಭಾಗವು ಬುಧವಾರ ಏರ್ಪಡಿಸಿದ ಪ್ಲೇಸ್‌ಮೆಂಟ್‌ ಸ್ಕಿಲ್ ಮತ್ತು ಟ್ರೇನಿಂಗ್ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಹೆರಾಲ್ಡ್ ಐವನ್ ಮೋನಿಸ್ ಅಧ್ಯಕ್ಷತೆ ವಹಿಸಿದ್ದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಕೆ ಪ್ರವೀಣ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೈಟ್ ಕಾಲೇಜಿನ ಹಿರಿಯ ಸಹಾಯಕ ಪ್ರಾಧ್ಯಾಪಕ ವರುಣ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಸ್ವವಿವರ ಬರವಣಿಗೆ, ಆಪ್ಟಿಟ್ಯೂಡ್ ಟೆಸ್ಟ್, ಗುಂಪು ಚರ್ಚೆ, ಸಂದರ್ಶನವನ್ನು ಹೇಗೆ ಎದುರಿಸುವುದು ಸೇರಿದಂತೆ ಉದ್ಯೋಗ ಕೌಶಲಗಳ ಬಗ್ಗೆ ತರಬೇತಿ ನೀಡಿದರು.

ಉಪನ್ಯಾಸಕ ಪ್ರಕಾಶ್, ದಿವ್ಯಶ್ರೀ, ಕಾಲೇಜು ವಿದ್ಯಾರ್ಥಿಗಳಾದ ಅನುಪ್ ನಾಯಕ್, ಅಲಿಸ್ಟರ್ ಇದ್ದರು. ಛಾಯಾ ಕರ್ಕೇರ ಸ್ವಾಗತಿಸಿದರು. ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ದೀಪ್ತಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT