ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ನಾಳೆಯಿಂದ

Last Updated 29 ಜೂನ್ 2022, 14:25 IST
ಅಕ್ಷರ ಗಾತ್ರ

ಉಡುಪಿ: ಜುಲೈ 1ರಿಂದ ಉಡುಪಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಪೌರಾಯುಕ್ತ ಉದಯ ಶೆಟ್ಟಿ ತಿಳಿಸಿದ್ದಾರೆ.

2016 ರಿಂದ ಪ್ಲಾಸ್ಟಿಕ್ ನಿಷೇಧಿವಿದ್ದು, ಕ್ಯಾರಿ ಬ್ಯಾಗ್, ಬ್ಯಾನರ್‌, ಬಂಟಿಂಗ್ಸ್, ಪ್ಲೇಕ್ಸ್, ಪ್ಲೇಟ್‍ಗಳು, ಪ್ಲಾಸ್ಟಿಕ್ ಧ್ವಜಗಳು, ಕಪ್‍ಗಳು, ಸ್ಪೂನ್‍ಗಳು, ಡೈನಿಂಗ್ ಟೇಬಲ್‍ನಲ್ಲಿ ಬಳಸುವ ಪ್ಲಾಸ್ಟಿಕ್ ಹಾಳೆ, ಸ್ಟ್ರಾ, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳ ನಿಷೇಧವಿದೆ.

ಮೇಲಿನ ನಿಷೇಧಿತ ಉತ್ಪನ್ನಗಳ ಜೊತೆಗೆ ಜುಲೈ 1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಸ್ಟಿಕ್‍ ಇಯರ್ ಬಡ್‍, ಬಲೂನ್‍ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‍, ಪ್ಲಾಸ್ಟಿಕ್ ಧ್ವಜ, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‍ಗಳು, ಪ್ಲಾಸ್ಟಿಕ್ ಐಸ್‍ಕ್ರಿಮ್ ಸ್ಟಿಕ್‍ ಮತ್ತು ಲೋಟಗಳು, ಫೋರ್ಕ್‌ಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕು, ಪ್ಲಾಸ್ಟಿಕ್ ಟ್ರೇ, ಸ್ವೀಟ್ ಬಾಕ್ಸ್ ಸುತ್ತ ಸುತ್ತುವ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸುವಂತಿಲ್ಲ.

ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ಅಂಗಡಿ ಮಾಲೀಕರು, ಇ-ಕಾಮರ್ಸ್ ಕಂಪನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು, ಶಾಪಿಂಗ್ ಕೇಂದ್ರಗಳು, ಸಿನಿಮಾ ಮಾಲ್‍ಗಳು, ಮನೆಗಳು, ಪ್ರವಾಸೋದ್ಯಮ ಸ್ಥಳಗಳು, ಶಾಲೆಗಳು, ಕಾಲೇಜುಗಳು, ಕಚೇರಿ ಸಂಕೀರ್ಣಗಳು, ಆಸ್ಪತ್ರೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ ಸಂಗ್ರಹಣೆ ವಿತರಣೆ ಮಾರಾಟ ಮತ್ತು ಬಳಕೆ ನಿಲ್ಲಿಸಲಾಗಿದೆ.

ಜೂನ್ 30ರೊಳಗೆ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ದಾಸ್ತಾನು ಇರುವುಂತಿಲ್ಲ. ಇ-ಕಾಮರ್ಸ್ ಕಂಪನಿಗಳ ವೆಬ್ ಸೈಟ್‍ನಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಜಾಹೀರಾತುಗಳನ್ನು ನಿಷೇಧಿಸಲಾಗಿದೆ. ಆದೇಶಗಳನ್ನು ಉಲ್ಲಂಘಿಸಿದರೆ ಪರಿಸರ (ಸಂರಕ್ಷಣೆ) ಕಾಯ್ದೆ 1986 ರಡಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ತನ್ನಗಳನ್ನು ವಶಪಡಿಸಿಕೊಂಡು ಕೈಗಾರಿಕೆಗಳನ್ನು ಮುಚ್ಚಿಸಲಾಗುವುದು ಎಂದು ಪೌರಾಯುಕ್ತರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT