ಸೋಮವಾರ, ಆಗಸ್ಟ್ 8, 2022
24 °C

‘ಪೋಕ್ಸೊ ಕಾಯ್ದೆ ಅನುಷ್ಠಾನ: ಉಡುಪಿ ಮುಂದು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಉಡುಪಿ ಜಿಲ್ಲೆ ಪೋಕ್ಸೊ ಕಾಯ್ದೆ ಅನುಷ್ಠಾನದಲ್ಲಿ ಹಾಗೂ ಅಪರಾಧ ಪ್ರಕರಣಗಳ ಪತ್ತೆ ಹಚ್ಚುವಲ್ಲಿ ರಾಜ್ಯದಲ್ಲಿ ಮುಂಚೂಣಿಯಲ್ಲಿದೆ ಎಂದು ಜಿಲ್ಲಾ ಪಂಚಾಯಿತಿ ಎನ್‌ಆರ್‌ಎಲ್‌ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಹೇಳಿದರು.

ಪೋಕ್ಸೊ ಕಾಯ್ದೆ ಕುರಿತು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಎಸ್‌ಪಿ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿ, ಹೊರ ಜಿಲ್ಲೆಗಳಿಂದ ಜಿಲ್ಲೆಯ ಜನರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದು ತೀರಾ ವಿರಳ.

ಮಕ್ಕಳು ಮುಂದಿನ ಭವಿಷ್ಯವಾಗಿರುವ ಕಾರಣ ಪೊಲೀಸ್ ಅಧಿಕಾರಿಗಳು ಒತ್ತಡದ ಕಾರ್ಯದ ನಡೆವೆಯೂ ನೊಂದ ಮಕ್ಕಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಸಂತ್ರಸ್ತ ಮಕ್ಕಳಿಗೆ ಪುನರ್ವಸತಿ, ಆರೋಗ್ಯ, ಶಿಕ್ಷಣ ಅಗತ್ಯವಿದ್ದು, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಪತ್ತೆಯಾದರೆ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ನೀಡಬೇಕು ಎಂದರು.

ಪೋಕ್ಸೊ ತಿದ್ದುಪಡಿ ಕಾಯ್ದೆಯ ಪ್ರಕಾರ ಪೋಕ್ಸೊ ಅಪರಾಧಿಗೆ ಶಿಕ್ಷೆ ಇರುವಂತೆಯೇ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ವಿಚಾರ ತಿಳಿದಿದ್ದರೂ ವರದಿ ಮಾಡದ ಅಧಿಕಾರಿಗಳಿಗೂ ಕಾನೂನಿನಡಿ ಶಿಕ್ಷೆ ಇದೆ ಎಂದರು.

ಜಿಲ್ಲೆಯ 23 ಪೊಲೀಸ್ ಠಾಣೆಯ ಅಧಿಕಾರಿಗಳು ತರಬೇತಿ ಭಾಗವಹಿಸಿ ಪೋಕ್ಸೊ ಕಾಯ್ದೆ ವಿಷಯದಲ್ಲಿ ಚರ್ಚೆ ನಡೆಸಿ, ಮಾಹಿತಿ ಮತ್ತು ಕಾನೂನಾತ್ಮಕ ವಿಚಾರಗಳ ಮಾಹಿತಿ ಪಡೆದುಕೊಂಡರು.

ಹೆಚ್ಚುವರಿ ಎಸ್‌ಪಿ ಸಿದ್ದಲಿಂಗಪ್ಪ, ಉಡುಪಿ ಡಿವೈಎಸ್‌ಪಿ ಸುಧಾಕರ್ ನಾಯ್ಕ್ ಉಪಸ್ಥಿತರಿದ್ದರು. ಬ್ರಹ್ಮಾವರ ಪಿಎಸ್‌ಐ ಮುಕ್ತಾ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು