ಶುಕ್ರವಾರ, ಮೇ 14, 2021
32 °C

ಅಪ್ರಾಪ್ತೆಯ ಅತ್ಯಾಚಾರಕ್ಕೆ ಯತ್ನ: ಅಪ‍ರಾಧಿಗೆ 4 ವರ್ಷ ಜೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಜೀವ ಬೆದರಿಕೆ ಹಾಕಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯದ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಅಜಿತ್ ಶೆಟ್ಟಿ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ 2015ರಲ್ಲಿ ನೆರೆಮನೆಯ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಂದರ್ಭ ನೆರೆ ಮನೆಯವರು ಬಂದಾಗ, ಬಾಲಕಿಗೆ ಜೀವಬೆದರಿಕೆ ಹಾಕಿ‌ ಪರಾರಿಯಾಗಿದ್ದ. ಅಜಿತ್ ಶೆಟ್ಟಿ ಮೇಲೆ‌ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಕುಂದಾಪುರ ಉಪವಿಭಾಗದ ಡಿವೈಎಸ್ ಪಿ.ಎಂ.ಮಂಜುನಾಥ್ ಶೆಟ್ಟಿ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಆರೋಪಿಯ ಕೃತ್ಯ ಸಾಬೀತಾಗಿದ್ದರಿಂದ ಪೋಕ್ಸೊ ಕಾಯ್ದೆಯಡಿ 3 ವರ್ಷ ಜೈಲು, 10,000 ದಂಡ, ಜೀವ ಬೆದರಿಕೆ ಹಾಕಿದ್ದಕ್ಕೆ 1 ವರ್ಷ ಸಜೆ, ₹ 1,500 ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ 5000ವನ್ನು ಸರ್ಕಾರಕ್ಕೆ ₹ 6,500 ಸಂತ್ರಸ್ತೆಗೆ ನೀಡಲು ಹಾಗೂ ₹ 25,000ವನ್ನು ಕಾನೂನು ಸೇವಾ ಪ್ರಾಧಿಕಾರದ ಮೂಲಕ ಸಂತ್ರಸ್ತೆಗೆ ನೀಡಲು ನ್ಯಾಯಾಲಯ ಆದೇಶಿಸಿದೆ.

ಉಡುಪಿಯ ಪೋಕ್ಸೊ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು