ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ರಿಯರ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವನ ಪರ್ಯಂತ ಜೈಲು

Last Updated 30 ನವೆಂಬರ್ 2020, 15:37 IST
ಅಕ್ಷರ ಗಾತ್ರ

ಉಡುಪಿ: ಪುತ್ರಿಯರಿಬ್ಬರ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಅಪರಾಧಿಗೆ ಉಡುಪಿ ಹೆಚ್ಚುವರಿ ಜಿಲ್ಲಾಅ ಹಾಗೂ ಸೆಷನ್ಸ್ ನ್ಯಾಯಾಲಯ (ಪೋಕ್ಸೋ ತ್ವರಿತ ನ್ಯಾಯಾಲಯ) ಸೋಮವಾರ ಜೀವನ ಪರ್ಯಂತ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

14 ಹಾಗೂ 16 ವರ್ಷದ ಪುತ್ರಿಯರಿಗೆ ಅಪ್ಪನೇ ಲೈಂಕಿಗ ಹಲ್ಲೆ ನಡೆಸಿದ್ದ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ ಆರೋಪಿ ವಿರುದ್ಧ 2019ರಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ಅಂದಿನ ಸರ್ಕಲ್‌ ಇನ್‌ಸ್ಪೆಕ್ಟರ್‌ ಮಹೇಶ್‌ ಪ್ರಸಾದ್ ಪ್ರಕರಣದ ತನಿಖೆ ನಡೆಸಿದ್ದರು. ಬಳಿಕ ಸರ್ಕಲ್‌ ಇನ್‌ಸ್ಪೆಕ್ಟರ್‌ ಸಂಪತ್ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. 26 ಮಂದಿಯ ಸಾಕ್ಷಿಗಳ ಪೈಕಿ 8 ಮಂದಿಯ ವಿಚಾರಣೆ ನಡೆದು ಆರೋಪಿಯ ಕೃತ್ಯ ಸಾಬೀತಾಗಿತ್ತು. ಸೋಮವಾರ ನ್ಯಾಯಾಧೀಶರಾದ ಯಾದವ್ ವನಮಾಲಾ ಆನಂದರಾವ್‌ ಅವರು ಅಪರಾಧಿಗೆ ಜೀವನ ಪರ್ಯಂತ ಜೈಲು ಶಿಕ್ಷೆ ಆದೇಶ ಪ್ರಕಟಿಸಿದ್ದು, ₹ 15,000 ವಿಧಿಸಿದ್ದಾರೆ. ಪ್ರಕರಣದಲ್ಲಿ ಮೊದಲನೆಯ ನೊಂದ ಬಾಲಕಿಗೆ ₹ 5 ಲಕ್ಷ ಪರಿಹಾರ ಹಾಗೂ 2ನೇ ನೊಂದ ಬಾಲಕಿಗೆ ₹ 1.5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ವಿಶೇಷ ಸರ್ಕಾರಿ ಅಭಿಯೋಜಕರಾದ ವೈ.ಟಿ ರಾಘವೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT