ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ ಜಿಲ್ಲಾ ಗಡಿ ಪ್ರವೇಶಕ್ಕೆ ಮುತಾಲಿಕ್‌ಗೆ ತಡೆ

Last Updated 29 ಜುಲೈ 2022, 13:14 IST
ಅಕ್ಷರ ಗಾತ್ರ

ಪಡುಬಿದ್ರಿ: ಪ್ರವೀಣ್‌ ನೆಟ್ಟಾರು ಮನೆಗೆ ತೆರಳಲು ಹೊರಟಿದ್ದ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ಗೆ ಹೆಜಮಾಡಿಯ ಟೋಲ್ ಗೇಟ್ ಬಳಿ ಪೊಲೀಸರು ತಡೆಯೊಡ್ಡಿ ವಾಪಸ್‌ ಕಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್‌ಗೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಆದರೂ ನಿಯಮ ಮೀರಿ ಗಡಿ ಪ್ರವೇಶಿಸಲು ಯತ್ನಿಸಿದ ಹಿನ್ನೆಲೆಯಲ್ಲಿ ಮುತಾಲಿಕ್‌ ಅವರನ್ನು ಪೊಲೀಸರು ತಡೆದರು.

ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಅನುಮತಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಮುತಾಲಿಕ್ ಬೆಂಬಲಿಗರೊಂದಿಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿಯೇ ಕೆಲಕಾಲ ಧರಣಿ ನಡೆಸಿ ರಾಜ್ಯ ಸರ್ಕಾರ ಹಾಗೂ ಸಚಿವರ ವಿರುದ್ಧ ಘೋಷಣೆ ಕೂಗಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಮೃತ ಪ್ರವೀಣ್ ನೆಟ್ಟಾರು ಅವರ ಮನೆಗೆ ಸಾಂತ್ವನ ಹೇಳಲು ಹೊರಟ ಸಂದರ್ಭದಲ್ಲಿ ಪೊಲೀಸರು ಅಡ್ಡಿಪಡಿಸಿದ್ದು ಖಂಡನೀಯ ಹೊರಟಿದ್ದೇವೆ. ಬಿಜೆಪಿ ಸರ್ಕಾರ ಜಿಲ್ಲಾಡಳಿತದ ಮೂಲಕ ನಿರ್ಬಂಧ ಹಾಕಿಸಿದೆ. ನಿರ್ಬಂಧಕ್ಕೆ ಧಿಕ್ಕಾರ ಇದೆ. ಬಿಜೆಪಿ ಸರ್ಕಾರ ಹಿಂದೂ ವಿರೋಧಿ ಎಂದು ರುಜುವಾತಾಗಿದೆ. ಹಿಂದೂ ಕಾರ್ಯಕರ್ತರು ಸರ್ಕಾರಕ್ಕೆ ಉಗಿದು ರಾಜೀನಾಮೆ ನೀಡುತ್ತಿದ್ದು ಬಿಜೆಪಿ ಬಣ್ಣ ಬಯಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಹಿಂದೂ ನಾಯಕರಿಗೆ ಇರದ ನಿರ್ಬಂಧ ನನಗೆ ಮಾತ್ರ ಏಕೆ ಎಂದು ಪ್ರಶ್ನಿಸಿದ ಮುತಾಲಿಕ್ ಸರ್ಕಾರ ಸಮಸ್ತ ಹಿಂದೂ ಸಮಾಜಕ್ಕೆ ಅಪಮಾನ ಮಾಡಿದೆ’ ಎಂದು ಕಿಡಿ ಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT