ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ ಕಚೇರಿಗೆ ಪೋಸ್ಟರ್‌ ಅಂಟಿಸಲು ಯತ್ನ: ಪೊಲೀಸರಿಂದ ತಡೆ

Bjp
Published 25 ಜೂನ್ 2024, 6:32 IST
Last Updated 25 ಜೂನ್ 2024, 6:32 IST
ಅಕ್ಷರ ಗಾತ್ರ

ಉಡುಪಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತದೆ ಎಂಬ ಕಾಂಗ್ರೆಸ್ ಆರೋಪವನ್ನು ಖಂಡಿಸಿ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಫೋಸ್ಟರ್ ಅಂಟಿಸಲು ಮುಂದಾದ ಬಿಜೆಪಿ ಮುಖಂಡರನ್ನು ಪೊಲೀಸರು ತಡೆದರು.

‌‌‘ತುರ್ತುಪರಿಸ್ಥಿತಿ ಹೇರಿದ ಇಂದಿರಾ, ಸ್ವಾರ್ಥಕ್ಕಾಗಿ ಸಂವಿಧಾನ ದುರ್ಬಳಕೆ!, ಖರ್ಗೆ ಕ್ಷಮೆ ಕೇಳಲಿ’  ಮೊದಲಾದ ಬರಹಗಳಿದ್ದ ಪೋಸ್ಟರ್ ಅನ್ನು ಬಿಜೆಪಿ ಮುಖಂಡರು ಹಿಡಿದುಕೊಂಡು ಕಾಂಗ್ರೆಸ್ ಕಚೇರಿಗೆ ತೆರಳಲು ಮುಂದಾದರು. ಅವರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದರು. ಪೊಲೀಸರ ಮನವಿಗೆ ಸ್ಪಂದಿಸಿದ ಮುಖಂಡರು ಪ್ರತಿಭಟನೆಯನ್ನು ಕೈಬಿಟ್ಟರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಸಂವಿಧಾನ ವಿರೋಧಿ ಎಂದು ಬಿಜೆಪಿ ಮೇಲೆ ಕಾಂಗ್ರೆಸ್‌ನವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ.  ತುರ್ತು ಪರಿಸ್ಥಿತಿಯನ್ನು ಹೇರಿದವರು ಯಾರು?, ತುರ್ತು ಪರಿಸ್ಥಿತಿಯಿಂದ ಎಷ್ಟು ಜನರಿಗೆ ತೊಂದರೆ ಆಗಿದೆ? ಎನ್ನುವಂತಹ ಸತ್ಯ ಜನರಿಗೆ ಗೊತ್ತಾಗಬೇಕು. ಈ ಕಾರಣಕ್ಕಾಗಿ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸುವ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಶ್ಮಾಉದಯ್ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ಮಾಧ್ಯಮ ವಕ್ತಾರ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಸಂಧ್ಯಾ ರಮೇಶ್, ಮುಖಂಡರಾದ ಶ್ಯಾಮಲ ಕುಂದರ್, ಗಿರೀಶ್ ಅಂಚನ್ ಮೊದಲಾದವರು  ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT