ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

73,636 ಮಕ್ಕಳಿಗೆ ಪೊಲೀಯೋ ಲಸಿಕೆ

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ
Last Updated 31 ಜನವರಿ 2021, 14:29 IST
ಅಕ್ಷರ ಗಾತ್ರ

ಉಡುಪಿ: ನಗರದ ಸರ್ಕಾರಿ ಕೂಸಮ್ಮ ಶಂಭುಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮವನ್ನು ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಉದ್ಘಾಟಿಸಿದರು.

ಉಡುಪಿಯಲ್ಲಿ 33,316 ಮಕ್ಕಳ ಗುರಿಗೆ ಪ್ರತಿಯಾಗಿ 33,414 ಮಕ್ಕಳಿಗೆ, ಕುಂದಾಪುರದಲ್ಲಿ 27413 ಮಕ್ಕಳಿಗೆ ಪ್ರತಿಯಾಗಿ 27,019 ಮಕ್ಕಳಿಗೆ, ಕಾರ್ಕಳದಲ್ಲಿ 13,320 ಮಕ್ಕಳಿಗೆ ಪ್ರತಿಯಾಗಿ 13,203 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು. ಜಿಲ್ಲೆಯಲ್ಲಿ ಒಟ್ಟಾರೆ 73,636 ಮಕ್ಕಳಿಗೆ ಪೋಲಿಯೋ ಹಾಕಲಾಗಿದ್ದು, ಶೇ 99.44 ಗುರಿ ಸಾಧಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಡಿಎಚ್‌ಓ ಡಾ.ಸುಧೀರ್ ಚಂದ್ರ ಸೂಡಾ, ಲಸಿಕೆಯ ಯೋಜನಾ ನಿರ್ದೇಶಕಿ ಡಾ.ಇಂದುಮತಿ, ಡಾ.ಎಂ.ಜಿ.ರಾಮ , ಡಾ. ಪ್ರೇಮಾನಂದ್, ಡಾ. ಪ್ರಶಾಂತ್ ಶೆಟ್ಟಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಶಿಖಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ರೋಟರಿ ಕ್ಲಬ್ ಅಧ್ಯಕ್ಷೆ ರಾಧಿಕಾ ಲಕ್ಷ್ಮೀ ನಾರಾಯಣ, ಕಾರ್ಯದರ್ಶಿ ದೀಪಾ ಭಂಡಾರಿ, ಲಸಿಕಾ ಉಸ್ತುವಾರಿ ಐ.ಕೆ. ಜಯಚಂದ್ರ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ 5 ವರ್ಷದೊಳಗಿನ 74,049 ಮಕ್ಕಳಿಗೆ ಪೊಲೀಯೋ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, 657 ಲಸಿಕಾ ಕೇಂದ್ರ, 8 ಮೊಬೈಲ್ ತಂಡ ಹಾಗೂ 37 ಟ್ರಾನ್ಸಿಟ್ ಬೂತ್ ಗಳನ್ನು ತೆರೆಯಲಾಗಿದೆ. 2,768 ಲಸಿಕಾ ಸ್ವಯಂ ಸೇವಕರು, 133 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT