ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರ್ಮಿಕ ಸ್ಥಳಗಳಲ್ಲಿ ಪೂಜೆಗೆ ಅನುಮತಿ: ಜಿಲ್ಲಾಧಿಕಾರಿ

Last Updated 26 ಜುಲೈ 2021, 13:49 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯ ದೇವಾಲಯಗಳು, ಮಸೀದಿಗಳು, ಚರ್ಚ್‌ಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಲಾಗಿದ್ದು, ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಜುಲೈ 25ರಿಂದ ದೇವಸ್ಥಾನಗಳಲ್ಲಿ ಪೂಜಾ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು ಹಾಗೂ ಸಭೆಗಳನ್ನು ನಡೆಸಲು ಅನುಮತಿ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಯಂತೆ ಅಮ್ಯೂಸ್‌ಮೆಂಟ್‌ ಪಾರ್ಕ್ ಮತ್ತು ಅದೇ ಮಾದರಿಯ ಇತರ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ, ಜಲಕ್ರೀಡೆ, ಜಲ ಸಂಬಂಧಿ ಸಾಹಸ ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ. ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT