ಮಂಗಳವಾರ, ಅಕ್ಟೋಬರ್ 26, 2021
21 °C
ಉಡುಪಿಯಲ್ಲಿ ನೂತನ ವಿಜ್ಞಾನ ಸಮುಚ್ಚಯ, ಗಣಕ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

ಪೂರ್ಣಪ್ರಜ್ಞ ಪದವಿ ಕಾಲೇಜಿಗೆ ಸಿಎಂ ಶಿಲಾನ್ಯಾಸ 13ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಅ.13ರಂದು ಬೆಳಿಗ್ಗೆ 11 ಗಂಟೆಗೆ ಅದಮಾರಿನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವಿಜ್ಞಾನ ಸಮುಚ್ಚಯಕ್ಕೆ ಶಿಲಾನ್ಯಾಸ ಹಾಗೂ ಗಣಕವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಲಿದ್ದಾರೆ ಎಂದು ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಸೋಮವಾರ ಪೂರ್ಣ ಪ್ರಜ್ಞ ಕಾಲೇಜಿನಲ್ಲಿ ನಡೆಸ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮಾತನಾಡಿ, ಅದಮಾರಿನ ಕಾಲೇಜಿನ ವಾಸುದೇವ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಆದರ್ಶ ಆಸ್ಪತ್ರೆಯ ಆಡಳಿತ ಮಂಡಳಿ ನಿರ್ದೇಶಕ ಡಾ.ಜಿ.ಎಸ್‌.ಚಂದ್ರಶೇಖರ್ ಉಪಸ್ಥಿತರಿರಲಿದ್ದಾರೆ ಎಂದರು.

ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ವಿಬುಧೇಶ ತೀರ್ಥ ಸ್ವಾಮೀಜಿ ಗುಣಮಟ್ಟದ ಶಿಕ್ಷಣ ನೀಡುವ ಆಶಯದಿಂದ ದೇಶದಾದ್ಯಂತ 23 ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು. ಗುರುಗಳ ಹಾದಿಯಲ್ಲಿ ಸಾಗಿರುವ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಶಿಕ್ಷಣ ಸಂಸ್ಥೆಗಳನ್ನು ಉನ್ನತೀಕರಿಸಿ 39 ಶಿಕ್ಷಣ ಸಂಸ್ಥೆಗಳಿಗೆ ಏರಿಸಿದ್ದಾರೆ. ಅದಮಾರಿನಲ್ಲಿ ನಿರ್ಮಾಣವಾಗುತ್ತಿರುವುದು 40ನೇ ಕಾಲೇಜಾಗಿದ್ದು, ವಿದ್ಯಾರ್ಥಿಗಳಿಗೆ ಬಿಕಾಂ ಹಾಗೂ ಬಿಸಿಎ ಶಿಕ್ಷಣ ದೊರೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಗೌರವ ಕೋಶಾಧಿಕಾರಿ ಪ್ರವೀಣ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಪೈ, ಪ್ರತಿಮಾ ಬಾಳಿಗಾ, ಉಪ ಪ್ರಾಂಶುಪಾಲರಾದ ಡಾ.ಒಲ್ವಿಟಾ ಡಿಸೋಜ, ಗುರುರಾಜ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎ.ರಾಘವೇಂದ್ರ, ಉಪ ಪ್ರಾಂಶುಪಾಲ ಡಾ.ಪ್ರಕಾಶ್ ರಾವ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.