ಕುಂದಾಪುರ: ವಂಡ್ಸೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಪೋಷಣ್ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಟಿ.ಕೋಟ್ಯಾನ್, ಕಾರ್ಯಕ್ರಮದ ಉದ್ದೇಶ ಹಾಗೂ ಸಮತೂಕದ ಆಹಾರದ ಬಗ್ಗೆ ಮಾಹಿತಿ ನೀಡಿದರು.

ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಂ.ಜಿ. ರಾಮ ಅವರು, ಗರ್ಭಿಣಿ-ಬಾಣಂತಿಯರು ಮತ್ತು ಮಕ್ಕಳಿಗೆ ಬೇಕಾದ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗೋವರ್ದನ್ ಜೋಗಿ, ನಿರಾಮಯ ಸೊಸೈಟಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಹಕ್ಲಾಡಿಗ್ರಾಮ ಪಂಚಾಯಿತಿ ಸದಸ್ಯ ಅಶೋಕ್ ಪೂಜಾರಿ, ವಂಡ್ಸೆಗ್ರಾಮ ಪಂಚಾಯಿತಿ ಸದಸ್ಯರಾದ ಶಶಿಕಲಾಎಸ್. ವಂಡ್ಸೆ, ಸುಬ್ಬು, ಸಂಜೀವಿನಿ ಸಂಘದ ಅಧ್ಯಕ್ಷೆ ಸಲ್ಮಾ, ಸ್ತ್ರೀಶಕ್ತಿ ಸಂಘದ ಪದಾಧಿಕಾರಿ ಜುಲೇಖ ಇದ್ದರು.

ಮೂಕಾಂಬು, ಸುಶೀಲಾ, ರೇಖಾ ಪ್ರಾರ್ಥಿಸಿದರು. ಮೇಲ್ವಿಚಾರಕಿ ಭಾಗ್ಯವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆತ್ರಾಡಿ ಅಂಗನವಾಡಿ ಕಾರ್ಯಕರ್ತೆ ಅಕ್ಕಮ್ಮ ಸ್ವಾಗತಿಸಿದರು. ದೀಪಿಕಾ ವಂದಿಸಿದರು. ಶ್ರೀಲಕ್ಷ್ಮೀ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯ ನೆರವೇರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.