ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಪ್ರದಾಯಿಕ ಆಹಾರದ ಮಹತ್ವ ತಿಳಿಯಿರಿ

Last Updated 29 ಸೆಪ್ಟೆಂಬರ್ 2022, 3:15 IST
ಅಕ್ಷರ ಗಾತ್ರ

ಕಾರ್ಕಳ: ತಾಲ್ಲೂಕಿನ ದುರ್ಗ ಪಂಚಾಯಿತಿಯಲ್ಲಿ ನವಚೇತನ ಸಂಜೀವಿನಿ ಒಕ್ಕೂಟದಿಂದ ಪೋಷಣ್ ಅಭಿಯಾನದ ಅಡಿಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಆಹಾರ ಮೇಳ ನಡೆಯಿತು.

ಅಭಿಯಾನ ಉದ್ಘಾಟಿಸಿದ ಅಧ್ಯಕ್ಷ ಸತೀಶ್ ನಾಯಕ್ ಮಾತನಾಡಿ, ‘ರಾಸಾಯನಿಕಗಳನ್ನು ಉಪಯೋಗಿಸಿ ಆಹಾರ ಪದಾರ್ಥ ಬೆಳೆಯುವ ಚಾಳಿ ಹೆಚ್ಚಾಗಿದೆ. ಇದರಿಂದ ಅರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ. ಹೀಗಾಗಿ ಸಾಂಪ್ರದಾಯಿಕ ಆಹಾರದ ಮಹತ್ವ ತಿಳಿಸುವ ಕಾರ್ಯ ಆಗಬೇಕು’ ಎಂದರು.

ಸಂಜೀವಿನಿ ಒಕ್ಕೂಟದ ತಾಲ್ಲೂಕು ವ್ಯವಸ್ಥಾಪಕ ಗಣೇಶ್ ಮಾತನಾಡಿ ಸಂಜೀವಿನಿ ಸದಸ್ಯರಿಂದ ಇಂತಹ ಕಾರ್ಯಕ್ರಮಗಳು ತಾಲ್ಲೂಕಿನ ಎಲ್ಲಾ ಕಡೆ ನಡೆಯುತ್ತಿದ್ದು ಸ್ವ ಉದ್ಯೋಗಗಳನ್ನು ಕೈಗೊಳ್ಳುವ ಮೂಲಕ ಸ್ವಾವಲಂಬಿ ಬದುಕು ರೂಪಿಸಲಾಗುತ್ತಿದೆ ಎಂದರು. ಒಕ್ಕೂಟದ ಅಧ್ಯಕ್ಷೆ ಶೈನಾಜ್, ಗ್ರಾಮ ಕರಣಿಕರಾದ ಮೇಘನಾ, ಪಂಚಾಯಿತಿ ಕಾರ್ಯದರ್ಶಿ ಸುಬ್ಬಯ್ಯ ಇದ್ದರು. ಶಶಿಕಲಾ ನಿರೂಪಿಸಿದರು. ಉಮಾವತಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT