ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈಹಿಕ, ಮಾನಸಿಕ ಬಲಿಷ್ಟ ಮಕ್ಕಳು ದೇಶದ ಆಸ್ತಿ: ಪೋಷಣ್ ಅಭಿಯಾನ

ಪೋಷಣ್ ಅಭಿಯಾನ ಯೋಜನೆಯ ಸಮಾರೋಪ
Last Updated 5 ಏಪ್ರಿಲ್ 2022, 14:09 IST
ಅಕ್ಷರ ಗಾತ್ರ

ಉಡುಪಿ: ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್‌.ಶರ್ಮಿಳಾ ಹೇಳಿದರು.

ಸೋಮವಾರ ಆತ್ರಾಡಿ ಗ್ರಾಮ ಪಂಚಾಯಿತಿಯಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ್ ಯೋಜನೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೈಹಿಕ ಹಾಗೂ ಮಾನಸಿಕವಾಗಿ ಬಲಿಷ್ಠರಾಗಿರುವ ಮಕ್ಕಳು ದೇಶದ ಆಸ್ತಿಯಾಗಿದ್ದು, ಸರ್ಕಾರ ನೀಡುವ ಪೌಷ್ಟಿಕ ಆಹಾರ ಮಕ್ಕಳಿಗೆ ತಲುಪಬೇಕು ಎಂದರು.

ಆತ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳಿಗೆ ಅಂಗನವಾಡಿ ಮೂಲಕ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅರ್ಹರು ಪಡೆದುಕೊಳ್ಳಬೇಕು ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪೋಷಣ್ ಅಭಿಯಾನ ಹಾಗೂ ಇಲಾಖಾ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಪೌಷ್ಟಿಕ ಆಹಾರಗಳ ಪ್ರಾತ್ಯಕ್ಷಿಕೆ ನೀಡಲಾಯಿತು.

ಹಿರೇಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನರಸಿಂಹ ನಾಯಕ್. ಆತ್ರಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರತ್ನಾಕರ ಶೆಟ್ಟಿ, ಎನ್.ಆರ್.ಎಲ್.ಎಂ ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಲಯನ್ಸ್ ಕ್ಲಬ್ ಉಡುಪಿ ಚೇತನಾ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಸಂಜೀವಿನಿ ಗ್ರಾಮ ಒಕ್ಕೂಟದ ಅಧ್ಯಕ್ಷೆ ಆಶಾ ಎಂ. ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಇದ್ದರು.

ಆತ್ರಾಡಿ ಗ್ರಾಮ ಪಂಚಾಯಿತಿ ಪಿಡಿಒ ಸಂತೋಷ್ ಜೋಗಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ವಲಯ ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT