ಕುಂದಾಪುರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್‌ಚಂದ್ರ ಶೆಟ್ಟಿ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯರಾಗಿ ಮುಂದುವರಿಯಲಿದ್ದಾರೆ.

4 ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, ಮೂರು ಬಾರಿ ವಿಧಾನಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿರುವ ಪ್ರತಾಪ್‌ಚಂದ್ರ ಶೆಟ್ಟಿ ಅವರು ವಿಧಾನ ಪರಿಷತ್ ಸಭಾಪತಿಗಳಾಗಿಯೂ ಸೇವೆ ಸಲ್ಲಿಸಿದ್ದರು.

ಯುವ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್, ಕೆಪಿಸಿಸಿ ಕಾರ್ಯದರ್ಶಿ, ಉಪಾಧ್ಯಕ್ಷ, ಎಐಸಿಸಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೇರಿದಂತೆ ಪಕ್ಷದ ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸಿ ಪಕ್ಷದ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದರು.

ಕಳೆದ ಬಾರಿ ಸ್ಥಳೀಯ ಸಂಸ್ಥೆಯ ಚುನಾವಣೆಗೆ ಸ್ಪರ್ಧಿಸಲು ಪಕ್ಷ ಹಾಗೂ ಅಭಿಮಾನಿಗಳಿಂದ ಒತ್ತಡವಿದ್ದಾಗಲೂ ಕಣದಿಂದ ಹಿಂದೆ ಸರಿದಿದ್ದರು. ಜ.13ರಂದು ಕೆಪಿಸಿಸಿ ಸದಸ್ಯತ್ವಕ್ಕೆ ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವ ನಾರಾಯಣ್, ಎಐಸಿಸಿ ಕಾರ್ಯದರ್ಶಿ ರೋಜಿ ಎಂ.ಜಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಬುಧವಾರ ಹಾಲಾಡಿ-ಹೈಕಾಡಿಯ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

ರಾಜೀನಾಮೆ ವಿಚಾರವಾಗಿ ಪತ್ರಿಕೆ ಜತೆ ಮಾತನಾಡಿದ ಪ್ರತಾಪ್‌ಚಂದ್ರ ಶೆಟ್ಟಿ, ರಾಜೀನಾಮೆ ಹಿಂದೆ ರಾಜಕೀಯ ಉದ್ದೇಶಗಳಿಲ್ಲ. ಪಕ್ಷದಲ್ಲಿ ಕ್ರಿಯಾಶೀಲ ನಾಯಕರಿದ್ದು ಮುಂಬರುವ ಚುನಾವಣೆಯಲ್ಲಿ ಉತ್ಸಾಹಿಗಳಿಗೆ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯಲಿದ್ದೇನೆ ಎಂದು ಸ್ವಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.