ಹೆಬ್ರಿ: ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ಅವಕಾಶ ಎಂದು ಹೇಳಿದ ಶಾಸಕ ಸುನಿಲ್ ಕುಮಾರ್ ಪ್ರತಿಭೆ, ಸಂಸ್ಕೃತಿ ಬದುಕಿಗೆ ಪೂರಕವಾದರೆ ಪರಿಪೂರ್ಣ ವ್ಯಕ್ತಿತ್ವದ ನಿರ್ಮಾಣವಾಗುತ್ತದೆ ಎಂದರು.

ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್ ಮಾತನಾಡಿದರು. ಹೆಬ್ರಿಯ ಬಂಟರ ಸಂಘದಿಂದ ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ತನಕ ಮೆರವಣಿಗೆ ನಡೆಯಿತು. ಟ್ಯಾಬ್ಲೋಗಳು ಮೆರುಗು ನೀಡಿದವು.

ರಾಜ್ಯದ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಹೆಬ್ರಿ ಪ್ರತಿಭಾ ಕಾರಂಜಿಯ ಸ್ವಾಗತ ಸಮಿತಿಯ ಅಧ್ಯಕ್ಷ ಯೋಗೀಶ ಭಟ್, ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಬಂಗೇರ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಶಂಕರ ಶೇರಿಗಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ ಕುಂದಾಪುರ, ಎಲ್ಲಮ್ಮ, ಉಮಾ, ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ ಶೆಟ್ಟಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಸ್ಥಳೀಯ ಮುಖಂಡ ಗುರುದಾಸ ಶೆಣೈ, ಹೆಬ್ರಿ ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರಾಜ ಶೆಟ್ಟಿ, ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ ಕುಮಾರ್, ಉಪ ಪ್ರಾಂಶುಪಾಲ ದಿವಾಕರ ಮರಕಾಲ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೀತಾನದಿ ವಿಜೇಂದ್ರ ಶೆಟ್ಟಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್, ನೋಡೆಲ್ ಅಧಿಕಾರಿ ಬಿ.ಜ್ಯೋತಿ ಭಾಗವಹಿಸಿದ್ದರು. ಶಶಿಧರ ಶೆಟ್ಟಿ ನಿರೂಪಿಸಿದರು. ಗಿರಿಜಮ್ಮ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.