ಕಾರ್ಕಳ: ‘ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವಿದ್ಯಾರ್ಥಿಗಳ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಪ್ರಮುಖ ವೇದಿಕೆಯಾಗಿದೆ’ ಎಂದು ಕೆರ್ವಾಶೆ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಹರಿ ಭಟ್ ಹೇಳಿದರು.

ತಾಲ್ಲೂಕಿನ ಕೆರ್ವಾಶೆ ಬಂಗ್ಲೆಗುಡ್ಡೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದಾನಿ ನಿವೃತ್ತ ಏರ್ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಮಾತನಾಡಿ, ಶಿಕ್ಷಣದಲ್ಲಿ ಸಂಸ್ಕಾರ ಅತಿ ಅಗತ್ಯ ಎಂದರು.

ಇದರ ಪೂರ್ವಭಾವಿಯಾಗಿ ಶಾಲಾ ಪ್ರಾಂಗಣದಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಚಿಣ್ಣರ ಕಲರವ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕೆರ್ವಾಶೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನೀತಾ ಪೂಜಾರಿ ಶುಭಹಾರೈಸಿದರು. ಶಾಸಕ ವಿ. ಸುನಿಲ್ ಕುಮಾರ್ ದಾನಿಗಳ ನಾಮಫಲಕ ಅನಾವರಣಗೊಳಿಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುನಿಲ್ ಶೆಟ್ಟಿ ಮಕ್ಕಳ ಹಸ್ತಪ್ರತಿ ‘ಅಕ್ಷರ ಚಿತ್ತಾರ’ ಬಿಡುಗಡೆಗೊಳಿಸಿದರು.

ಧರ್ಮರಾಜ ಹೆಗ್ಡೆ, ಪುಷ್ಪಾ ನಾಯ್ಕ್, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ನಾರಾಯಣ ಗುಡಿಗಾರ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸ್ವಾತಿ ವಿ. ನಾಯಕ್, ನಿವೃತ್ತ ಮುಖ್ಯಶಿಕ್ಷಕ ಸಂಜೀವ ದೇವಾಡಿಗ, ಶಾಲಾಭಿಮಾನಿ ರಾಮಣ್ಣ ಸೇರ್ವೆಗಾರ್, ಅಶೋಕ್, ಲಕ್ಷ್ಮಣ ಪೂಜಾರಿ, ರಾಮರಾಯ ನಾಯಕ್, ಸಂಜೀವ ಗುಡಿಗಾರ್, ಶೇಖರ್ ಶೆಟ್ಟಿ, ನಾಗೇಶ್ ನಾಯಕ್, ಜಯರಾಮ್ ಬಂಗೇರ ಅವರು ಪ್ರತಿಭಾವಂತರಿಗೆ ಪ್ರಶಸ್ತಿ ವಿತರಿಸಿದರು.

2024–25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಪ್ರಕೃತಿ ಗುಡಿಗಾರ್ ಅವರನ್ನು ಅಭಿನಂದಿಸಲಾಯಿತು.

ಮುಖ್ಯಶಿಕ್ಷಕಿ ಪ್ರಮೀಳಾ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕಿಯರಾದ ಸುನೀತಾ ನಾಯಕ್ ನಿರೂಪಿಸಿದರು. ಅಶ್ವಿನಿ, ಸೌಮ್ಯಾ, ಸುಪ್ರೀತಾ ಸಹಕರಿಸಿದರು. ಎಸ್ಡಿಎಂಸಿ ಉಪಾಧ್ಯಕ್ಷೆ ರೂಪಾ ಶೆಟ್ಟಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳಿಂದ ವಿವಿಧ ನೃತ್ಯಾವಳಿ, ಕಿರುನಾಟಕ ಪ್ರದರ್ಶನಗೊಂಡವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.