ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್ ನೆಟ್ಟಾರು ಕೊಲೆ: ಎನ್‌ಐಎ ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ

Last Updated 27 ಜುಲೈ 2022, 15:33 IST
ಅಕ್ಷರ ಗಾತ್ರ

ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

‘ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಕೇರಳ ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಬಂದ ಹಂತಕರು ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದ್ದಾರೆ. ಸಮಾಜದ ಶಾಂತಿ ಕದಡಲು ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಗಳಾದ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕೇರಳದ ಮೂಲಭೂತವಾದಿ ಸಂಘಟನೆಗಳು ಕೊಲೆಗೆ ಸಂಚು ರೂಪಿಸಿ ಧನ ಸಹಾಯ ಮಾಡಿರುವ ಶಂಕೆಯೂ ಇದೆ' ಎಂದು ಶೋಭಾ ಪತ್ರದಲ್ಲಿ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಈಗಾಗಲೇ ಹಿಂದೂಗಳ ಹಾಗೂ ಬಿಜೆಪಿ ಕಾರ್ಯಕರ್ತರ ಸರಣಿ ಹತ್ಯೆಗಳು ನಡೆದಿವೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೇಂದ್ರ ಗೃಹ ಇಲಾಖೆ ಮಧ್ಯೆ ಪ್ರವೇಶಿಸಿ ಪಿಎಫ್‌ಐ, ಎಸ್‌ಡಿಪಿಐ ಹಾಗೂ ಇತರ ಮೂಲಭೂತವಾದಿ ಸಂಘಟನೆಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕು. ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆಗಳ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆದಿರುವ ಅನುಮಾನವಿದ್ದು, ಎನ್‌ಐಎ ತನಿಖೆಯಾಗಬೇಕು ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT