ಉಡುಪಿ: ನಿವೃತ್ತ ಯೋಧ ಹಾಗೂ ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್ ಡಾಯಸ್ (88) ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಿಗೆ ಪತ್ನಿ, ನಾಲ್ವರು ಪುತ್ರಿಯರು ಹಾಗೂ ಓರ್ವ ಪುತ್ರ ಇದ್ದಾರೆ.

ಆರ್. ಎಲ್. ಡಾಯಸ್ ಎರಡು ದಶಕಗಳಿಂದ ಉಡುಪಿ ರೈಲ್ವೆ ಯಾತ್ರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಬೆಂಗಳೂರು ಹಾಗೂ ಕರಾವಳಿ ನಡುವೆ ಹಲವು ರೈಲ್ವೆ ಯೋಜನೆಗಳ ಅನುಷ್ಠಾನ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದವರು ಡಾಯಸ್.

ರೈಲ್ವೆ ಹೋರಾಟಗಳಲ್ಲಿ ಸಕ್ರಿಯವಾಗಿದ್ದುಕೊಂಡು ಪ್ರಯಾಣಿಕರ ಬೇಡಿಕೆಗಳ ಈಡೇರಿಕೆಗೆ ಅವಿರತವಾಗಿ ಶ್ರಮಿಸುತ್ತಿದ್ದರು. ಉಡುಪಿ ರೈಲ್ವೆ ಯಾತ್ರಿ ಸಂಘದ ನೇತೃತ್ವದಲ್ಲಿ ಸಂಘಟಿತ ಹೋರಾಟದ ಮೂಲಕ ಕರಾವಳಿಯ ಪ್ರಯಾಣಿಕರಿಗೆ ಹಲವು ರೈಲ್ವೆ ಸೌಲಭ್ಯಗಳು ದೊರೆಯುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಉಡುಪಿಯಲ್ಲಿ ನರ್ಮ್ ಬಸ್ಗಳ ಸೌಲಭ್ಯ ಪ್ರಯಾಣಿಕರಿಗೆ ಸಿಗುವಲ್ಲಿಯೂ ಡಾಯಸ್ ಅವರ ಶ್ರಮ ಹೆಚ್ಚಾಗಿತ್ತು ಎಂದು ಅವರ ಆಪ್ತರು ಸ್ಮರಿಸುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.