'ಸೋಮವಾರ ಖಾಸಗಿ ಬಸ್ಗಳ ಬಂದ್ ಇಲ್ಲ'

ಉಡುಪಿ: ರಾಜ್ಯದಲ್ಲಿ ಸೋಮವಾರ ಖಾಸಗಿ ಬಸ್ಗಳ ಬಂದ್ ಇಲ್ಲ. ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ ಬಂದ್ಗೆ ಕರೆ ನೀಡಿಲ್ಲ ಎಂದು ಒಕ್ಕೂಟದ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ 4 ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಹಂತ ಹಂತವಾಗಿ ಬೇಡಿಕೆ ಈಡೇರಿಸುವ ವಿಶ್ವಾಸವಿದೆ. ಸರ್ಕಾರಕ್ಕೆ ಬೆಂಬಲವಾಗಿ ಖಾಸಗಿ ಬಸ್ಗಳು ನಿಂತಿದ್ದು, 8,500ಕ್ಕೂ ಹೆಚ್ಚು ಬಸ್ಗಳು ಓಡಾಡಲಿವೆ. ಬಂದ್ ಮಾಡುವುದಾಗಿ ಹೇಳಿರುವ ನಟರಾಜ್ ಶರ್ಮಾ ಹೇಳಿಕೆಗೂ ನಮಗೂ ಸಂಬಂಧವಿಲ್ಲ. ಪ್ರಯಾಣಿಕರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಇದನ್ನೂ ಓದಿ: ಸಾರಿಗೆ ನೌಕರರ ಹಲವು ಬೇಡಿಕೆಗಳಿಗೆ ಒಪ್ಪಿಗೆ
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.