ಉಡುಪಿ: ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಬಾಲಕಿಯರ ಪದವಿಪೂರ್ವ ಕಾಲೇಜಿನ ಸವ್ಯಸಾಚಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ರಕ್ಷಣೆಗಾಗಿ ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಭೌತಿಕ ಅಪಘಾತ, ದೌರ್ಜನ್ಯ ಸೇರಿದಂತೆ ಕೆಲವೊಂದು ದುರ್ಘಟನೆಗಳು ಸಂಭವಿಸುತ್ತಿವೆ. ಶಾಲಾ ಆವರಣ ಹಾಗೂ ಶಾಲಾ ಚಟುವಟಿಕೆಯ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಇಲಾಖೆಗಳೊಂದಿಗೆ ಸಮನ್ವಯತೆ ಹೊಂದಿ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದರಿಂದ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದರು.

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿಯ ನಿಯಮಾವಳಿಗಳನ್ನು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೋಚಿಂಗ್ ಸೆಂಟರ್ ಸೇರಿದಂತೆ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಇದೇ 30ರೊಳಗೆ ಅನುಷ್ಠಾನಗೊಳಿಸಿ, ಅದರ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು ಎಂದು ಅವರು ಸೂಚಿಸಿದರು.

ಉಡುಪಿ ಜಿಲ್ಲೆಯು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದು, ಇದೇ 30ರ ಒಳಗಾಗಿ ರಾಜ್ಯ ಮಕ್ಕಳ ರಕ್ಷಣಾ ನೀತಿಯನ್ನು ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡುವುದರೊಂದಿಗೆ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗುವಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್. ಮಾತನಾಡಿ, ಕಾರ್ಯಾಗಾರವು ಕಾನೂನಿನ ಬಗ್ಗೆ ಅರಿವು ಮೂಡಿಸುವ ಮಹತ್ವದ ಉದ್ದೇಶ ಹೊಂದಿದೆ. ಕಾರ್ಯಕ್ರಮದ ಪ್ರಯೋಜನ ಪಡೆದ ಅಧಿಕಾರಿಗಳು ಸೇವೆಯಲ್ಲಿ ಅಳವಡಿಸಿಕೊಂಡು ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಮಾತನಾಡಿ, ಅಧಿಕಾರಿಗಳು ಕಾಯ್ದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದಾಗ ಮಾತ್ರ ಕಾರ್ಯಾಗಾರಗಳು ಯಶಸ್ವಿಯಾಗುತ್ತವೆ ಎಂದರು.

ಸಂಪನ್ಮೂಲ ವ್ಯಕ್ತಿ ಯುನಿಸೆಫ್ನ ಸಿಸ್ಟರ್ ದುಲ್ಸಿನಾ ಕ್ರಾಸ್ತ ಮಕ್ಕಳ ರಕ್ಷಣೆಗೆ ಇರುವ ಕಾಯ್ದೆಗಳನ್ನು ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ವಹಿಸಬೇಕಾದ ಸೂಕ್ಷ್ಮತೆಯ ಕುರಿತು ಮಾಹಿತಿ ನೀಡಿದರು.

ಎಎಸ್ಪಿ ಸಿದ್ದಲಿಂಗಪ್ಪ, ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ, ಬಾಲ ನ್ಯಾಯ ಮಂಡಳಿ ಅಧ್ಯಕ್ಷ ಮನು ಪಟೇಲ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ ಕೆ, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಶಾ ಅಲ್ತಾಫ್ ಅಹಮದ್ ಇದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಜ್ಯೋತಿ ನಿರೂಪಿಸಿದರು.

ಆಯೋಗವು ಫೆಬ್ರುವರಿ ಮಾರ್ಚ್ ತಿಂಗಳಲ್ಲಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಮಕ್ಕಳ ರಕ್ಷಣಾ ನೀತಿಯ ನಿಯಮಾವಳಿಗಳ ವರದಿ ಅನುಷ್ಠಾನ ಮಾಡದಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು
ತಿಪ್ಪೇಸ್ವಾಮಿ ಕೆ.ಟಿ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.