ಉಡುಪಿ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರ ವಿರುದ್ಧ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಯುವಮೋರ್ಚಾ ವತಿಯಿಂದ ನಗರದ ಬನ್ನಂಜೆ ನಾರಾಯಣ ಗುರು ವೃತ್ತದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ವರೆಗೆ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.
ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪೃಥ್ವಿರಾಜ್ ಹೆಗ್ಡೆ ಮಾತನಾಡಿ, ಐವನ್ ಡಿಸೋಜ ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಲಾಗುತ್ತಿದೆ ಎಂದೂ ಆರೋಪಿಸಿದರು.
ಪ್ರಧಾನ ಕಾರ್ಯದರ್ಶಿ ಶಶಾಂತ್ ಶಿವತ್ತಾಯ, ಅಭಿರಾಜ್ ಸುವರ್ಣ ಉಪಸ್ಥಿತರಿದ್ದರು.