ಉಡುಪಿ: ‘ಅಂಗವಿಕಲರಿಗೆ ಸರ್ಕಾರ ನೀಡುತ್ತಿರುವ ಮಾಸಾಶನ ಹೆಚ್ಚಿಸಬೇಕು’ ಎಂದು ದಿವ್ಯಾಂಗರ ರಕ್ಷಣಾ ಸಮಿತಿಯ ಸಂಚಾಲಕ ವಿಜಯ ಕೊಡವೂರು ಆಗ್ರಹಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾ ಸಮಿತಿ, ದಿವ್ಯಾಂಗರ ರಕ್ಷಣಾ ಸಮಿತಿ, ಸಕ್ಷಮ ಸಂಸ್ಥೆ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

‘ಶೇ 40ರಿಂದ ಶೇ75ರಷ್ಟು ವಿಕಲತೆ ಇರುವವರಿಗೆ ಪ್ರತಿ ತಿಂಗಳು ಕನಿಷ್ಠ ₹5 ಸಾವಿರ ಹಾಗೂ ಶೇ75ಕ್ಕಿಂತ ಹೆಚ್ಚಿನ ವಿಕಲತೆ ಇರುವವರಿಗೆ ₹10 ಸಾವಿರ ಮಾಸಾಶನ ನೀಡಬೇಕು’ ಎಂದು ಒತ್ತಾಯಿಸಿದರು.

ಅಂಗವಿಕಲರಿಗೆ ಸ್ವಾವಲಂಬಿ ಜೀವನ ನಡೆಸಲು ಆರ್ಥಿಕ ಭದ್ರತೆ ಒದಗಿಸುವ ಯಾವುದೇ ಯೋಜನೆ ಇಲ್ಲ. ಬೆಲೆ ಏರಿಕೆಯಿಂದಾಗಿ ಜೀವನ ನಿರ್ವಹಣೆ ಕಷ್ಟವಾಗಿದ್ದು, ಅವರ ಬೇಡಿಕೆಗಳನ್ನು ಈಡೇರಿಸಬೇಕು. ರಾಜ್ಯದಲ್ಲಿ ಅಂಗವಿಕಲ ಹಕ್ಕುಗಳ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರವನ್ನು ಕುಂದಾಪುರದ ನಾಡಾದಲ್ಲಿ ಗುರುತಿಸಲಾದ ಸ್ಥಳದಲ್ಲಿ ನಿರ್ಮಿಸಲು ಮುಂದಿನ ಬಜೆಟ್ನಲ್ಲಿ ಅನುದಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಅಂಗವಿಕಲರ ಗುರುತಿನ ಚೀಟಿ ಆಧರಿಸಿ ರಾಜ್ಯದಾದ್ಯಂತ ಶೇ 75ರಷ್ಟು ರಿಯಾಯಿತಿ ಒದಗಿಸುವ ಕೆಎಸ್ಆರ್ಟಿಸಿ ಪಾಸ್ ಅನ್ನು ನೀಡಬೇಕು. ರಾಜ್ಯದಾದ್ಯಂತ ಶೇ 5ರಷ್ಟು ಗುತ್ತಿಗೆ ಕಾಮಗಾರಿಗಳನ್ನು ಟೆಂಡರ್ ನೋಂದಾಯಿತ ಅಂಗವಿಕಲ ಗುತ್ತಿಗೆದಾರರಿಗೆ ಮಾತ್ರ ನೀಡಲು ಅವಕಾಶ ಕಲ್ಪಿಸಿಕೊಂಡಬೇಕು ಎಂದರು.

ಜಿಲ್ಲೆಯಲ್ಲಿ ಅಂಗವಿಕಲರ ಸಭಾ ಭವನ ನಿರ್ಮಿಸಲು ಯೋಜನೆ ರೂಪಿಸಬೇಕು ಹಾಗೂ ಅಂಗವಿಕಲರ ಜಿಲ್ಲಾ ಕಚೇರಿಯು ಉಡುಪಿಯಲ್ಲಿ ಕಾರ್ಯ ನಿರ್ವಹಿಸಬೇಕು. ಹೀಮೊಫೀಲಿಯಾಕ್ಕೆ ಸಂಬಂಧಿಸಿದ ಚುಚ್ಚುಮದ್ದಿಗಾಗಿ ಅನುದಾನವನ್ನು ಮೀಸಲಿರಿಸಿ, ಚುಚ್ಚುಮದ್ದು ಸದಾಕಾಲ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಲಸಿಕೆ ದೊರಕುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಪ್ರತಿಭಟನಾ ಸಭೆಗೂ ಮುನ್ನ ಮಣಿಪಾಲದ ಕಾಯಿನ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಮಂಜುನಾಥ ಹೆಬ್ಬಾರ್, ರವೀಂದ್ರ ಹೆಮ್ಮಾಡಿ, ವೆಂಕಟೇಶ್, ಹರೀಶ್ ಶೆಟ್ಟಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.