ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಬಳಿ ನಡೆದ ಹಿಂದೂ ಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಜಿಲ್ಲಾ ಘಟಕ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ, ಬಿಜೆಪಿ ಕಾರ್ಯಕರ್ತರು ಬೀದಿಗೆ ಇಳಿದು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿದೆ ಎಂದರು.

ಜನನಿಬಿಡ ಪ್ರದೇಶದಲ್ಲಿ ಯಾರ ಭಯವು ಇಲ್ಲದೇ ಕೊಲೆ ಮಾಡಿದ್ದಾರೆ. ಪೊಲೀಸ್ ಇಲಾಖೆ ನೈಜ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿದರು.

ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಯುವಮೋರ್ಚಾ ಅಧ್ಯಕ್ಷ ಪೃಥ್ವಿ, ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.