ಶನಿವಾರ, ಜುಲೈ 31, 2021
28 °C
27 ಕೇಂದ್ರಗಳಲ್ಲಿ ಪರೀಕ್ಷೆ; ಮಾಸ್ಕ್ ಕಡ್ಡಾಯ

ಪಿಯುಸಿ ಪರೀಕ್ಷೆ: 13,547 ನೋಂದಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜೂನ್ 18ರಂದು ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದ್ದು, ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.

ಜಿಲ್ಲೆಯಲ್ಲಿ 13,547 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದು, ಹೊರ ಜಿಲ್ಲೆಗಳಿಂದ 160 ಮತ್ತು ಹೊರ ರಾಜ್ಯದಿಂದ ಒಬ್ಬರು ವಿದ್ಯಾರ್ಥಿ ಪರೀಕ್ಷೆ ಬರೆಯಲಿದ್ದಾರೆ. ಪ್ರಶ್ನೆ ಪತ್ರಿಕೆ ವಿತರಿಸಲು 8 ತಂಡ ರಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ನೇಮಿಸಲಾಗಿದೆ. ಹೆಚ್ಚುವರಿಯಾಗಿ 2 ಬ್ಲಾಕ್‌ಗಳನ್ನು ಗುರುತಿಸಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬರಲು ಕೆಎಸ್‌ಆರ್‌ಟಿಸಿ ಉಚಿತ ಬಸ್‌ ವ್ಯವಸ್ಥೆ ಮಾಡಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವ ಮುನ್ನ ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷೆ ಮಾಡಲಾಗುವುದು. ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.