ಶುಕ್ರವಾರ, ಜೂಲೈ 10, 2020
24 °C
ಕಂಟೈನ್‌ಮೆಂಟ್‌ ಪ್ರದೇಶಗಳಿಂದ ಬಂದು ಪರೀಕ್ಷೆ ಬರೆದ 10 ವಿದ್ಯಾರ್ಥಿಗಳು

ಎಸ್ಸೆಸ್ಸೆಲ್ಸಿ ಪರೀಕ್ಷೆ: 12,976 ಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಿಜ್ಞಾನ ವಿಷಯದ ಪರೀಕ್ಷೆಯಲ್ಲಿ 12,976 ವಿದ್ಯಾರ್ಥಿಗಳು ಹಾಜರಾಗಿದ್ದು, 109 ಮಕ್ಕಳು ಗೈರಾಗಿದ್ದಾರೆ.

ಒಟ್ಟು 13,768 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಹೊರ ಜಿಲ್ಲೆಗಳ 82 ವಲಸೆ ಕಾರ್ಮಿಕರ ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೈಂದೂರು ಕಂಟೈನ್‌ಮೆಂಟ್ ಝೋನ್‌ನಿಂದ 3, ಕುಂದಾಪುರದಿಂದ 1, ಕಾರ್ಕಳದಿಂದ 2, ಉಡುಪಿ ಉತ್ತರದಿಂದ ಇಬ್ಬರು ಹಾಗೂ ದಕ್ಷಿಣದಿಂದ ಒಬ್ಬ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದು, ಅನಾರೋಗ್ಯ ಸಮಸ್ಯೆಗಳಿದ್ದ 6 ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಯಾವುದೇ ಪರೀಕ್ಷಾ ಅಕ್ರಮಗಳು ನಡೆದಿಲ್ಲ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತರಲು 82 ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು