ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತಿಗೆ ಶ್ರೀಗಳ ಪುರಪ್ರವೇಶ ಇಂದು

Published 7 ಜನವರಿ 2024, 20:16 IST
Last Updated 7 ಜನವರಿ 2024, 20:16 IST
ಅಕ್ಷರ ಗಾತ್ರ

ಉಡುಪಿ: ಪುತ್ತಿಗೆ ಮಠದ ಪರ್ಯಾಯ ಮಹೋತ್ಸವ ಪೂರ್ವಭಾವಿಯಾಗಿ ಭಾವಿ ಪರ್ಯಾಯ ಪೀಠಾಧಿಪತಿಗಳಾದ ಸುಗುಣೇಂದ್ರತೀರ್ಥ ಸ್ವಾಮೀಜಿ ಹಾಗೂ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಪುರಪ್ರವೇಶ ಕಾರ್ಯಕ್ರಮ ಸೋಮವಾರ (ಜ.8) ನಡೆಯಲಿದೆ.

ಮಧ್ಯಾಹ್ನ 3.30ಕ್ಕೆ ನಗರದ ಜೋಡುಕಟ್ಟೆಯ ಬಳಿ ಉಭಯ ಯತಿಗಳಿಗೆ ಅದ್ದೂರಿ ಸ್ವಾಗತ ಕೋರಿ ಮೆರವಣಿಗೆಯ ಮೂಲಕ ರಥಬೀದಿಗೆ ಕರೆತರಲಾಗುವುದು. ಸಂಜೆ ಜಿಲ್ಲಾಡಳಿತದ ವತಿಯಿಂದ ಶ್ರೀಗಳಿಗೆ ಪೌರಸನ್ಮಾನ ಆಯೋಜಿಸಲಾಗಿದೆ. 

ಪುರಪ್ರವೇಶ ಮೆರವಣಿಗೆಯಲ್ಲಿ ನಾಡಿನ ಹಲವು ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಲಿವೆ. 18ರಂದು ಸುಗುಣೇಂದ್ರತೀರ್ಥ ಶ್ರೀಗಳು ಸರ್ವಜ್ಞ ಪೀಠಾರೋಹಣ ಮಾಡಲಿದ್ದಾರೆ. ಅಂದಿನಿಂದ ಮುಂದಿನ ಎರಡು ವರ್ಷಗಳ ಅವಧಿಗೆ ಪುತ್ತಿಗೆ ಮಠದ ಪರ್ಯಾಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT